ಸಂಗ್ರಹ ಚಿತ್ರ 
ಕ್ರಿಕೆಟ್

ಸಮಸ್ಯೆ ಇತ್ಯರ್ಥಕ್ಕೆ ಯತ್ನ ಮಾಡಿದ್ದೆ, ಬೇರೆ ದಾರಿ ಇಲ್ಲದೇ ಕಾನೂನು ಕ್ರಮಕ್ಕೆ ಮುಂದಾಗಿದ್ದೇನೆ: ಶಮಿ

ಹಸೀನ್ ಜಹಾನ್ ಳೊಂದಿಗಿನ ಸಮಸ್ಯೆ ಇತ್ಯರ್ಥಕ್ಕೆ ನಾನು ಸಕಲ ರೀತಿಯ ಪ್ರಯತ್ನ ಮಾಡಿದ್ದೆ. ಆದರೆ ಆಕೆ ಪೂರಕವಾಗಿ ಪ್ರತಿಕ್ರಿಯಿಸುತ್ತಿಲ್ಲ. ಹೀಗಾಗಿ ನಾನು ಕಾನೂನು ಕ್ರಮಕ್ಕೆ ಮುಂದಾಗಿದ್ದೇನೆ ಎಂದು ಕ್ರಿಕೆಟಿಗ ಮಹಮದ್ ಶಮಿ ಹೇಳಿದ್ದಾರೆ.

ಕೋಲ್ಕತಾ: ಪತ್ನಿ ಹಸೀನ್ ಜಹಾನ್ ಳೊಂದಿಗಿನ ಸಮಸ್ಯೆ ಇತ್ಯರ್ಥಕ್ಕೆ ನಾನು ಸಕಲ ರೀತಿಯ ಪ್ರಯತ್ನ ಮಾಡಿದ್ದೆ. ಆದರೆ ಆಕೆ ಪೂರಕವಾಗಿ ಪ್ರತಿಕ್ರಿಯಿಸುತ್ತಿಲ್ಲ. ಹೀಗಾಗಿ ನಾನು ಕಾನೂನು ಕ್ರಮಕ್ಕೆ ಮುಂದಾಗಿದ್ದೇನೆ ಎಂದು ಕ್ರಿಕೆಟಿಗ ಮಹಮದ್ ಶಮಿ ಹೇಳಿದ್ದಾರೆ.
ಶಮಿ ಅವರ ಕೋಲ್ಕತಾ ನಿವಾಸಕ್ಕೆ ಪೊಲೀಸರು ಆಗಮಿಸಿ ವಿಚಾರಣೆ ನಡೆಸಿದ ಹಿನ್ನಲೆಯಲ್ಲಿ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿರುವ ಶಮಿ, ಪೊಲೀಸ್ ಅಧಿಕಾರಿಗಳ ವಿಚಾರಣೆಗೆ ನಾವು ಸಂಪೂರ್ಣ ಸಹಕಾ ನೀಡಿದ್ದೇವೆ. ನಾನು ಮತ್ತು ನನ್ನ ಕುಟುಂಬಸ್ಥರು ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೂ ನಮಗೆ ತಿಳಿದ ಉತ್ತರ ನೀಡಿದ್ದೇವೆ ಎಂದು ಹೇಳಿದ್ದಾರೆ. 
ಅಂತೆಯೇ ಪತ್ನಿ ಹಸೀನ್ ಜಹಾನ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಮಿ, ಕಳೆದ 7-8 ದಿನಗಳಿಂದ ನಾನು ಸಮಸ್ಯೆ ಇತ್ಯರ್ಥಕ್ಕೆ ಸಕಲ ಪ್ರಯತ್ನಗಳನ್ನು ಮಾಡಿದೆ. ಆದರೆ ಆಕೆ ನಮ್ಮ ಯಾವುದೇ ಪ್ರಯತ್ನಕ್ಕೂ ಪೂರಕವಾಗಿ ಪ್ರತಿಕ್ರಿಯಿಸುತ್ತಿಲ್ಲ. ಹಸೀನ್ ಜಹಾನ್ ತಾನು ಮಾಡಿದ ಆರೋಪಗಳ ಪೈಕಿ ಶೇ.50 ರಷ್ಟು ಆರೋಪಗಳನ್ನೂ ಕೂಡ ಸಾಬೀತು ಪಡಿಸಲಾಗಿಲ್ಲ. ನನಗೂ ಸಾಕಾಗಿ ಹೋಗಿದೆ. ಆಕೆ ಯಾವ ಹಂತಕ್ಕೆ ಹೋಗುತ್ತಾಳೆಯೋ ನೋಡೋಣ ನಾನು ಕೂಡ ಅದಕ್ಕೆ ಸಿದ್ಧನಾಗಿದ್ದು, ಆಕೆಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುತ್ತೇನೆ ಎಂಜು ಹೇಳಿದ್ದಾರೆ.
ನನ್ನ ವೈಯುಕ್ತಿಕ ಬದುಕಿಗೂ ನನ್ನ ವೃತ್ತಿ ಬದುಕಿಗೂ ಯಾವುದೇ ಸಂಬಂಧವಿಲ್ಲ. ನನ್ನ ಕ್ರಿಕೆಟ್ ಬದುಕಿಗೆ ಅಡ್ಡಿ ಪಡಿಸುವ ಉದ್ದೇಶದಿಂದ ಈ ಆರೋಪಗಳನ್ನು ಮಾಡಲಾಗುತ್ತಿದ್ದು, ನನ್ನ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಬಿಸಿಸಿಐಗೆ ಮನವಿ ಮಾಡಿಕೊಂಡಿದ್ದೇನೆ. ನಾನು ನಿರಪರಾಧಿ ಎಂದು ಸಾಬೀತಾದರೆ ನಾನು ಕ್ರಿಕೆಟ್ ಆಡಲು ಅವಕಾಶ ಮಾಡಿಕೊಂಡಿ ಎಂದು ಶಮಿ ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT