ಭಾರತ ಮಹಿಳಾ ತಂಡ 
ಕ್ರಿಕೆಟ್

ಟಿ20 ತ್ರಿಕೋನ ಸರಣಿ: ಆಸ್ಟ್ರೇಲಿಯಾ ವಿರುದ್ಧ ಭಾರತ ಮಹಿಳಾ ತಂಡಕ್ಕೆ ಸೋಲು

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಸೋಲಿನ ಬಳಿಕ ಭಾರತ ಮಹಿಳಾ ತಂಡ ಇದೀಗ ಟಿ20 ತ್ರಿಕೋನ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಆರು ವಿಕೆಟ್ ಗಳಿಂದ ಸೋಲು ಕಂಡಿದೆ...

ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಸೋಲಿನ ಬಳಿಕ ಭಾರತ ಮಹಿಳಾ ತಂಡ ಇದೀಗ ಟಿ20 ತ್ರಿಕೋನ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಆರು ವಿಕೆಟ್ ಗಳಿಂದ ಸೋಲು ಕಂಡಿದೆ. 
ಮುಂಬೈನ ಬ್ರಾಬೌರ್ನ್ ಕ್ರೀಡಾಂಗಣದಲ್ಲಿ ನಡೆದ ಟಿ20 ತ್ರಿಕೋನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಆಸ್ಟ್ರೇಲಿಯಾ ಫಿಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಇದರೊಂದಿಗೆ ಮೊದಲು ಬ್ಯಾಟ್ ಮಾಡಿದ ಭಾರತ ಮಹಿಳಾ ತಂಡ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 152 ರನ್ ಪೇರಿಸಿತು. 153 ರನ್ ಗುರಿ ಪಡೆದ ಆಸ್ಟ್ರೇಲಿಯಾ 18.1 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 156 ರನ್ ಬಾರಿಸಿ 6 ವಿಕೆಟ್ ಗಳಿಂದ ಗೆಲುವು ಸಾಧಿಸಿತು. 
ಭಾರತ ಪರ ಸ್ಮೃತಿ ಮಂದಾನ 67, ಅನುಜಾ ಪಾಟೀಲ್ 35, ಮಿಥಾಲಿ ರಾಜ್ 18 ಮತ್ತು ವೇದಾ ಕೃಷ್ಣಮೂರ್ತಿ ಅಜೇಯ 15 ರನ್ ಬಾರಿಸಿದ್ದಾರೆ. ಆಸ್ಟ್ರೇಲಿಯಾ ಪರ ಬೌಲಿಂಗ್ ನಲ್ಲಿ ಗ್ರಾಂಡ್ನರ್ ಮತ್ತು ಪೆರ್ರಿ ತಲಾ 2 ವಿಕೆಟ್ ಪಡೆದಿದ್ದಾರೆ. 
ಆಸ್ಟ್ರೇಲಿಯಾ ಪರ ಮೊನೀ 45, ವಿಲ್ಲನಿ 39, ಗಾರ್ಡ್ನೆರ್ 15 ಮತ್ತು ಲಲ್ಲಿಂಗ್ 35 ರನ್ ಸಿಡಿಸಿದರು. ಭಾರತ ಪರ ಬೌಲಿಂಗ್ ನಲ್ಲಿ ಗೋಸ್ವಾಮಿ 3 ಮತ್ತು ಪೂನಂ ಯಾದವ್ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!