ಸಂಗ್ರಹ ಚಿತ್ರ 
ಕ್ರಿಕೆಟ್

ಚೆಂಡು ವಿರೂಪಗೊಳಿಸಿದ ಪ್ರಕರಣ: ಆಸಿಸ್ ನಾಯಕ ಸ್ಮಿತ್. ಉಪನಾಯಕ ವಾರ್ನರ್ ಗೆ 12 ತಿಂಗಳ ನಿಷೇಧ?

ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಚೆಂಡನ್ನು ವಿರೂಪಗೊಳಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಸ್ಟೀವ್ ಸ್ಮಿತ್ ಹಾಗೂ ಉಪನಾಯಕ ಡೇವಿಡ್ ವಾರ್ನರ್ 12 ತಿಂಗಳ ನಿಷೇದ ಶಿಕ್ಷೆ ನೀಡುವ ಕುರಿತು ಕ್ರಿಕೆಟ್ ಆಸ್ಟ್ರೇಲಿಯಾ ಮುಂದಾಗಿದೆ ಎಂದು ತಿಳಿದುಬಂದಿದೆ.

ಸಿಡ್ನಿ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಚೆಂಡನ್ನು ವಿರೂಪಗೊಳಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಸ್ಟೀವ್ ಸ್ಮಿತ್ ಹಾಗೂ ಉಪನಾಯಕ ಡೇವಿಡ್ ವಾರ್ನರ್ 12 ತಿಂಗಳ ನಿಷೇದ ಶಿಕ್ಷೆ ನೀಡುವ ಕುರಿತು ಕ್ರಿಕೆಟ್ ಆಸ್ಟ್ರೇಲಿಯಾ ಮುಂದಾಗಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಮಾಜಿ ನಾಯಕನ ವಿರುದ್ಧ ಕೆಂಡಾಮಂಡಲವಾಗಿರುವ ಕ್ರಿಕೆಟ್ ಆಸ್ಟ್ರೇಲಿಯಾ ಸ್ಮಿತ್ ಗೆ ಆಜೀವ ನಿಷೇಧ ಹೇರಲು ಮುಂದಾಗಿತ್ತಾದರೂ, ಹಿರಿಯ ಮಾಜಿ ಕ್ರಿಕೆಟಿಗರ ಸಲಹೆ ಮೇರೆಗೆ ಸ್ಮಿತ್ ಗೆ ಒಂದು ವರ್ಷ ನಿಷೇಧ ಹೇರಲು ನಿರ್ಧರಿಸಿದೆ ಎನ್ನಲಾಗಿದೆ. ಅಲ್ಲದೆ ಉಪನಾಯಕ ಡೇವಿಡ್ ವಾರ್ನರ್ ಗೂ ಇದೇ ಶಿಕ್ಷೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. 
ಚೆಂಡು ವಿರೂಪಗೊಳಿಸಿದ ಪ್ರಕರಣವನ್ನು ತನಿಖೆಗೆ ಒಳಪಡಿಸಲು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ (ಸಿಎ) ನಿರ್ಧರಿಸಿದ್ದು, ಸಿಎ ಸೌಹಾರ್ದ ಘಟಕದ ಮುಖ್ಯಸ್ಥ ಇಯಾನ್ ರಾಯ್‌ ಮತ್ತು ಹೈ ಪರ್ಫಾರ್ಮೆನ್ಸ್‌ ವ್ಯವಸ್ಥಾಪಕ ಪ್ಯಾಟ್ ಹೊವಾರ್ಡ್ ಅವರನ್ನು ತನಿಖಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಅವರು ಸೋಮವಾರ ಕೇಪ್‌ಟೌನ್‌ ತಲುಪಿದ್ದು, ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಆಟಗಾರರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಅಂತೆಯೇ ಅಧಿಕಾರಿಗಳು ನಾಲ್ಕನೇ ಟೆಸ್ಟ್‌ಗಾಗಿ ತಂಡ ಜೊಹಾನ್ಸ್‌ಬರ್ಗ್‌ಗೆ ತೆರಳುವ ಮುನ್ನ ಮಾಹಿತಿ ಕಲೆ ಹಾಕಲಿದ್ದು, ಬಳಿಕ ಕ್ರಿಕೆಟ್ ಆಸ್ಟ್ರೇಲಿಯಾಗೆ ತಮ್ಮ ವರದಿ ನೀಡಿದ್ದಾರೆ ಎನ್ನಲಾಗಿದೆ.
ಈ ವರದಿಯನ್ನಾಧರಿಸಿ ಕ್ರಿಕೆಟ್ ಆಸ್ಟ್ರೇಲಿಯಾ ಆಸಿಸ್ ನಾಯಕ ಸ್ಮಿತ್ ಹಾಗೂ ಉಪ ನಾಯಕ ವಾರ್ನರ್ ಗೆ 12 ತಿಂಗಳ ಕ್ರಿಕೆಟ್ ನಿಷೇಧ ಹೇರಲು ಮುಂದಾಗಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ