ಭಾವುಕ ಡೇವಿಡ್ ವಾರ್ನರ್ 
ಕ್ರಿಕೆಟ್

ಇನ್ನೆಂದೂ ನಾನು ಆಸ್ಟ್ರೇಲಿಯಾ ಪರ ಆಡಲಾಗದು: ಕಣ್ಣೀರುಡುತ್ತಲೇ ಕ್ರಿಕೆಟ್ ಗೆ ಡೇವಿಡ್ ವಾರ್ನರ್ ನಿವೃತ್ತಿ

ನಾನು ಇನ್ನೆಂದೂ ಆಸ್ಟ್ರೇಲಿಯಾ ಪರ ಕ್ರಿಕೆಟ್ ಆಡುವುದಿಲ್ಲ ಎಂದು ಆಸಿಸ್ ತಂಡದ ಮಾಜಿ ಉಪನಾಯಕ ಡೇವಿಡ್ ವಾರ್ನರ್ ಶನಿವಾರ ಹೇಳಿದ್ದಾರೆ.

ಸಿಡ್ನಿ: ನಾನು ಇನ್ನೆಂದೂ ಆಸ್ಟ್ರೇಲಿಯಾ ಪರ ಕ್ರಿಕೆಟ್ ಆಡುವುದಿಲ್ಲ ಎಂದು ಆಸಿಸ್ ತಂಡದ ಮಾಜಿ ಉಪನಾಯಕ ಡೇವಿಡ್ ವಾರ್ನರ್ ಶನಿವಾರ ಹೇಳಿದ್ದಾರೆ.
ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವರ್ಷದ ನಿಷೇಧ ಶಿಕ್ಷೆಗೆ ಗುರಿಯಾಗಿರುವ ಡೇವಿಡ್ ವಾರ್ನರ್, ಇಂದು ಸಿಡ್ನಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ತೀವ್ರ ಭಾವುಕರಾದ ವಾರ್ನರ್, ಇನ್ನೆಂದೂ ಆಸ್ಟ್ರೇಲಿಯಾ ಪರ ಕ್ರಿಕೆಟ್​ ಆಡುವುದಿಲ್ಲ ಎಂದು ಹೇಳಿ ಕಣ್ಣೀರು ಹಾಕುತ್ತಲೇ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ.
ನನಗೆ ತಂಡವನ್ನು ಗೆಲ್ಲಿಸುವುದಷ್ಟೇ ಮುಖ್ಯವಾಗಿತ್ತು. ಹಾಗಾಗಿ ಈ ನಿರ್ಧಾರ ತೆಗೆದುಕೊಂಡೆ. ಇದರಿಂದ ಆಗುವ ವ್ಯತಿರಿಕ್ತ ಪರಿಣಾಮ ಅರ್ಥಮಾಡಿಕೊಳ್ಳಲಿಲ್ಲ. ಈ ಬಗ್ಗೆ ನನ್ನ ಜೀವವಿರುವವರೆಗೂ ಕೊರಗು ಕಾಡುತ್ತದೆ. ಪ್ರಕರಣದಲ್ಲಿ ತಮ್ಮದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸುವಂತಾಗಿದೆ. ಪ್ರಕರಣದಲ್ಲಿ ನಾನು ಬಲಿಪಶುವಾದೆನು ಎಂದೆನಿಸುತ್ತಿದೆ. ಈ ಪ್ರಕರಣ ನನ್ನ ಜೀವನದುದ್ದಕ್ಕೂ ನನ್ನನ್ನು ಕಾಡಲಿದೆ. ನನ್ನ ದೇಶಕ್ಕೆ ಜಯ ದೊರಕಿಸಿಕೊಡಬೇಕು ಎಂಬುದಷ್ಟೇ ನನ್ನ ಉದ್ದೇಶವಾಗಿತ್ತು. ಆದರೂ ಇಡೀ ಪ್ರಕರಣದ ಹೊಣೆಯನ್ನು ನಾನೇ ಹೊತ್ತುಕೊಳ್ಳುತ್ತೇನೆ ಎಂದು ವಾರ್ನರ್ ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್​ನಲ್ಲಿ ಕ್ಯಾಮರೂನ್ ಬ್ಯಾಂಕ್ರಾಫ್ಟ್​ ಸ್ಯಾಂಡ್​ಪೇಪರ್​ ಬಳಸಿ ಚೆಂಡು ವಿರೂಪಗೊಳಿಸಿ ಮೋಸವೆಸಗಿದ್ದರ ಸಂಪೂರ್ಣ ಹೊಣೆಯನ್ನು ನಾನೇ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಸುದ್ದಿಗೋಷ್ಠಿಯುದ್ದಕ್ಕೂ ತೀವ್ರ ಭಾವುಕರಾಗಿದ್ದ ಡೇವಿಡ್ ವಾರ್ನರ್ ಅಳುತ್ತಲೇ ತಮ್ಮ ಅಭಿಮಾನಿಗಳು, ಸಹ ಆಟಗಾರರು, ತಮ್ಮ ಕುಟುಂಹ ಹಾಗೂ ಆಸ್ಟ್ರೇಲಿಯಾ ಪ್ರಜೆಗಳ ಕ್ಷಮೆ ಕೋರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?