ಆರ್ ಸಿಬಿ 
ಕ್ರಿಕೆಟ್

ಐಪಿಎಲ್ 2018: ಮುಂಬೈ ಇಂಡಿಯನ್ಸ್ ವಿರುದ್ಧ ಆರ್.ಸಿ.ಬಿಗೆ 14 ರನ್ ಗಳ ಜಯ

ಮೇ.1 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್-ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದಲ್ಲಿ ಆರ್ ಸಿಬಿಗೆ 14 ರನ್ ಗಳ ಜಯ ದೊರೆತಿದೆ.

 ಬೆಂಗಳೂರು: ಮೇ.1 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್-ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದಲ್ಲಿ ಆರ್ ಸಿಬಿಗೆ 14 ರನ್ ಗಳ ಜಯ ದೊರೆತಿದೆ. 
ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ,  ಮುಂಬೈ ನ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು. ಎಡಿಬಿ ಅನುಪಸ್ಥಿತಿಯಲ್ಲಿ ಮನನ್ ವೋಹ್ರಾ (31 ಎಸೆತಗಳಲ್ಲಿ 45 ರನ್), ವಿರಾಟ್ ಕೊಹ್ಲಿ 26 ಎಸೆತಗಳಲ್ಲಿ 32 ರನ್, ಬ್ರೆಂಡನ್ ಮೆಕಾಲಮ್- 37 ರನ್ ಗಳಿಸಿ ತಂಡಕ್ಕೆ ಉತ್ತಮ ಮೊತ್ತವನ್ನು ದಾಖಲಿಸಲು ನೆರವಾದರು. 
ಆರ್ ಸಿಬಿ ನೀಡಿದ ಟಾರ್ಗೆಟ್ ನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ ಆರ್ ಸಿಬಿ ಬೌಲಿಂಗ್ ದಾಳಿಗೆ ತತ್ತರಿಸಿತು. ಆರಂಭಿಕ ಕ್ರಮಾಂಕದ ಆಟಗಾರರು, ರೋಹಿತ್ ಶರ್ಮಾ ಸೇರಿದಂತೆ ಭರವಸೆಯ ಆಟಗಾರರು ಪೆವಿಲಿಯನ್ ಪರೇಡ್ ನಡೆಸಿದರೆ, ಜೆಪಿ ಡ್ಯುಮಿನಿ 29 ಎಸೆತಗಳಲ್ಲಿ 23 ರನ್  ಹಾಗೂ ಹಾರ್ದಿಕ್ ಪಾಂಡ್ಯ 42 ಎಸೆತಗಳಲ್ಲಿ 50 ರನ್ ಗಳಿಸಿ ಆರ್ ಸಿಬಿಯನ್ನು ಎದುರಿಸಲು ಯತ್ನಿಸಿದರಾದರೂ  ಮುಂಬೈ ಇಂಡಿಯನ್ಸ್ ತಂಡಕ್ಕೆ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 153 ರನ್ ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್