ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಮಾಡು ಇಲ್ಲವೆ ಮಡಿ ಎಂಬಂತಿದ್ದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸಿದ್ದು ಒಂದು ಕಡೆಯಾದರೆ, ಈ ಪಂದ್ಯದ ಗೆಲ್ಲುವ ಮೂಲಕ ಕೊಹ್ಲಿ ಪತ್ನಿ ಹುಟ್ಟುಹಬ್ಬಕ್ಕೆ ಭರ್ಜರಿ ಉಡುಗೊರೆ ನೀಡಿದ್ದಾರೆ.
ಈ ಪಂದ್ಯ ಉಭಯ ತಂಡಗಳಿಗೂ ನಿರ್ಣಾಯಕ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಬ್ಯಾಟ್ಸ್ ಮನ್ ಗಳಿಗಿಂ ಬೌಲರ್ ಗಳೇ ಹೆಚ್ಚು ಗಮನ ಸೆಳೆದರು. ಆದರೆ ಕೊನೆಯಲ್ಲಿ ಆರ್ಸಿಬಿ ತಂಡ 14 ರನ್ ಗಳಿಂದ ಗೆಲುವು ಸಾಧಿಸಿತು.
ಸತತ ಸೋಲುಗಳಿಂದ ಕಂಗೆಟ್ಟಿದ್ದ ಆರ್ಸಿಬಿಗೆ ಈ ಪಂದ್ಯ ಗೆಲುವು ಮತ್ತಷ್ಟು ಆತ್ಮವಿಶ್ವಾಸವನ್ನು ಹೆಚ್ಚಿದೆ. ಪಂದ್ಯ ಗೆಲುವಿನ ನಂತರ ಮಾತನಾಡಿದ ಕೊಹ್ಲಿ ತಮ್ಮ ಪತ್ನಿಯ ಹುಟ್ಟುಹಬ್ಬದಂದು ಅವಳ ಮುಂದೆ ಗೆಲುವು ಸಾಧಿಸಿದ್ದು ತುಂಬಾ ಸಂತೋಷವಾಗಿದೆ. ಅನುಷ್ಕಾಳಿಗೆ ಈ ಗೆಲುವು ಒಂದು ಚಿಕ್ಕ ಉಡುಗೊರೆ ನೀಡಿದ್ದೇನೆ ಎಂದರು.
ಸದ್ಯ 6 ಅಂಕಗಳಿಂದ 5ನೇ ಸ್ಥಾನದಲ್ಲಿರುವ ಆರ್ಸಿಬಿ ಮುಂದಿನ 6 ಪಂದ್ಯಗಳಲ್ಲಿ 5 ಪಂದ್ಯಗಳನ್ನಾದರೂ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics