ದೆಹಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡದ ಆಟಗಾರ ಜೋಸ್ ಬಟ್ಲರ್ ವೇಗದ ಅರ್ಧ ಶತಕ ಸಿಡಿಸಿದ್ದಾರೆ.
ದೆಹಲಿಯ ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಜೋಸ್ ಬಟ್ಲರ್ 18 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿದ್ದಾರೆ. ಇನ್ನು ಒಟ್ಟಾರೆ 26 ಎಸೆತಗಳಲ್ಲಿ 7 ಸಿಕ್ಸರ್ ಹಾಗೂ 4 ಬೌಂಡರಿ ಸೇರಿದಂತೆ 67 ರನ್ ಸಿಡಿಸಿದ್ದಾರೆ.
ಇನ್ನು ಐಪಿಎಲ್ ಇತಿಹಾಸದಲ್ಲಿ ಅತೀ ವೇಗದ ಅರ್ಧ ಶತಕ ಸಿಡಿಸಿದ್ದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಆಟಗಾರ ಕನ್ನಡಿಗ ಕೆಎಲ್ ರಾಹುಲ್. ರಾಹುಲ್ 14 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿದ್ದಾರೆ.