ಐಪಿಎಲ್ 2018: ಚೆನ್ನೈ ವಿರುದ್ಧ ಕೋಲ್ಕತ್ತಾಗೆ 6 ವಿಕೆಟ್ ಗಳ ಜಯ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 6 ವಿಕೆಟ್ ಗಳಿಂದ ಜಯಗಳಿಸಿದೆ...
ಕೋಲ್ಕತ್ತಾ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 6 ವಿಕೆಟ್ ಗಳಿಂದ ಜಯಗಳಿಸಿದೆ.
ಈಡೆನ್ ಗಾರ್ಡನ್ಸ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 177 ರನ್ ಪೇರಿಸಿತು.
ಚೆನ್ನೈ ನೀಡಿದ 178 ರನ್ ಗಳ ಗುರಿ ಬೆನ್ನಟ್ಟಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 17.4 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 180 ರನ್ ಬಾರಿಸುವ ಮೂಲಕ 6 ವಿಕೆಟ್ ಗಳಿಂದ ಜಯ ಗಳಿಸಿದೆ.
ಚೆನ್ನೈ ಪರ ವಾಟ್ಸನ್ 36, ಸುರೇಶ್ ರೈನಾ 31, ಎಂಎಸ್ ಧೋನಿ 43 ರನ್ ಗಳಿಸಿದ್ದಾರೆ.
ಕೋಲ್ಕತ್ತಾ ಪರ ಸುನೀಲ್ ನರೈನ್ 32, ಶುಭ್ಮನ್ ಗಿಲ್ ಅಜೇಯ 57 ಮತ್ತು ದಿನೇಶ್ ಕಾರ್ತಿಕ್ ಅಜೇಯ 45 ರನ್ ಬಾರಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.