ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಅಪ್ಘಾನಿಸ್ತಾನ ವಿರುದ್ಧದ ಟೆಸ್ಟ್ ಹಾಗೂ ಜೂನ್ ತಿಂಗಳ 27 ರಂದು ದುಬೈಯಲ್ಲಿರುವ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್ ಗಳ ಕ್ರಿಕೆಟ್ ಪಂದ್ಯಕ್ಕಾಗಿ ಭಾರತದ ತಂಡವನ್ನು ರಾಷ್ಟ್ರೀಯ ಆಯ್ಕೆ ಸಮಿತಿ ಮೇ 8 ರಂದು ಆಯ್ಕೆ ಮಾಡಲಿದೆ.
ಮೇ 8 ರಂದು ಮೂರು ಪಂದ್ಯಕ್ಕಾಗಿ ತಂಡದ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಜೂನ್ 14ರಿಂದ18ರವರೆಗೆ ಅಪ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯ ನಡೆಯಲಿದೆ. ದುಬೈನಲ್ಲಿ ಇಂಗ್ಲೆಂಡ್ ಹಾಗೂ ಐರ್ಲೆಂಡ್ ವಿರುದ್ಧ ಎರಡು ಎಕದಿನ ಪಂದ್ಯಗಳು ನಡೆಯಲಿವೆ.
ಜೂನ್ ನಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ಭಾರತ ಎ ತಂಡದ ಆಟಗಾರರನ್ನು ಸಹ ಆಯ್ಕೆ ಮಾಡಲಾಗುತ್ತದೆ ಎಂದು ಬಿಸಿಸಿಐ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ವಿರಾಟ್ ಕೊಹ್ಲಿ, ಚೇತೇಶ್ವರ್ ಪೂಜಾರ್ ಮತ್ತು ಇಶಾಂತ್ ಶರ್ಮಾ, ಅಪ್ಘಾನಿಸ್ತಾನ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ. ಕೆಲ ಆಟಗಾರರಿಗೆ ಯುಕೆ ವೀಸಾ ಮತ್ತೊಂದು ಸಮಸ್ಯೆಯಾಗಿದ್ದು, ತಂಡವನ್ನು ತ್ವರಿತವಾಗಿ ಆಯ್ಕೆ ಮಾಡುವಂತೆ ಕ್ರಿಕೆಟ್ ಮಂಡಳಿಯನ್ನು ಕೇಳಲಾಗಿದೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಲಾಗುವುದು, ಆರರಿಂದ ಏಳು ಮಂದಿ ಟೆಸ್ಟ್ ಆಟಗಾರರು ಈ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಬಿಸಿಸಿಐ ಆಡಳಿತ ಸಮಿತಿಯ ಅಧಿಕಾರಿ ವಿನೋದ್ ರಾಯ್ ಹೇಳಿದ್ದಾರೆ.