ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವುದು ಭಾರತಕ್ಕೆ ಧನಾತ್ಮಕ ಮುನ್ಸೂಚನೆ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಪುಣೆಯಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ 23 ಎಸೆತಗಳಲ್ಲಿ 31 ರನ್ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಪಂದ್ಯ ಮುಕ್ತಾಯದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ ಐಪಿಎಲ್ ನಲ್ಲಿ ಎಂಎಸ್ ಧೋನಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಯಜುವೇಂದ್ರ ಚಹಾಲ್ ಬೌಲಿಂಗ್ ನಲ್ಲಿ ಒಂದೇ ಓವರ್ ನಲ್ಲಿ ಮೂರು ಸಿಕ್ಸರ್ ಗಳನ್ನು ಬಾರಿಸಿದ್ದರು.
ಈ ಪಂದ್ಯದಲ್ಲಿ ಚೆನ್ನೈ ಚೆನ್ನಾಗಿ ಆಡಿದ್ದಾರೆ ಮತ್ತು ಅವರು ಈ ಪಂದ್ಯವನ್ನು ಗೆಲ್ಲಲು ಅರ್ಹರಾಗಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಆರ್ಸಿಬಿಯ ಹಾದಿ ದುರ್ಗಮವಾಗಿದೆ ಎಂದು ತಿಳಿದಿದೆ. ಫ್ಲೇ ಆಫ್ ಗೆ ಹೋಗಬೇಕಾದರೆ ನಾವು ಕನಿಷ್ಠ 4 ಪಂದ್ಯ ಅಥವಾ 5 ಪಂದ್ಯಗಳನ್ನು ಗೆಲ್ಲಬೇಕು. ನಾನು ಮುಂದಿನ ಪಂದ್ಯಗಳ ಬಗ್ಗೆ ಆಶಾವಾದದ ಭಾವನೆ ಇದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics