ಕ್ರಿಕೆಟ್

ಎಂಎಸ್ ಧೋನಿ ತರ ಹೆಲಿಕಾಪ್ಟರ್ ಶಾಟ್ ಹೊಡೆದು ಮಿಂಚಿದ ಈಶಾನ್ ಕಿಶಾನ್, ವಿಡಿಯೋ ವೈರಲ್

Vishwanath S
ಕೋಲ್ಕತ್ತಾ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಹೆಲಿಕಾಪ್ಟರ್ ಶಾಟ್ ಗಳಿಂದಲೇ ಹೆಚ್ಚು ಪ್ರಸಿದ್ಧರಾದವರು. ಇದೀಗ ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರ ಈಶಾನ್ ಕಿಶನ್ ಹೆಲಿಕಾಪ್ಟರ್ ಶಾಟ್ ಹೊಡೆದು ಸಿಕ್ಸರ್ ಸಿಡಿಸಿದ್ದು ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ಕೋಲ್ಕತ್ತಾದ ಈಡೆನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕಿಶನ್ ಕೇವಲ 21 ಎಸತೆಗಳಲ್ಲಿ 5 ಬೌಂಡರಿ, 6 ಸಿಕ್ಸರ್ ನೆರವಿನಿಂದ 62 ರನ್ ಸಿಡಿಸಿ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. 
ಇಶನ್ ಕಿಶನ್ ಧೋನಿ ರೀತಿ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್ ಬಾರಿಸಿದ್ದು ಎಲ್ಲರ ಮೆಚ್ಚುಗೆ ಗಳಿಸಿದೆ. 
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 102 ರನ್ ಗಳಿಂದ ಭರ್ಜರಿ ಜಯ ಗಳಿಸಿದೆ.
SCROLL FOR NEXT