ಶಿಖರ್ ಧವನ್ - ವಿಲಿಯಮ್ಸನ್ ಸ್ಫೋಟಕ ಜೊತೆಯಾಟ: ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಹೈದರಾಬಾದ್ ಗೆ 9 ವಿಕೆಟ್ ಗಳ ಗೆಲುವು 
ಕ್ರಿಕೆಟ್

ಶಿಖರ್ ಧವನ್ - ವಿಲಿಯಮ್ಸನ್ ಸ್ಫೋಟಕ ಜೊತೆಯಾಟ: ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಹೈದರಾಬಾದ್ ಗೆ 9 ವಿಕೆಟ್ ಗೆಲುವು

ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಶಿಖರ್ ಧವನ್ ಹಾಗೂ ಕೇನ್ ವಿಲಿಯಮ್ಸನ್ ಸ್ಫೋಟಕ ಜೊತೆಯಾಟದ ಪರಿಣಾಮದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಡೆಲ್ಲಿ ಡೇರ್

ದೆಹಲಿ: ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಶಿಖರ್ ಧವನ್ ಹಾಗೂ ಕೇನ್ ವಿಲಿಯಮ್ಸನ್  ಸ್ಫೋಟಕ ಜೊತೆಯಾಟದ ಪರಿಣಾಮದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ 9  ವಿಕೆಟ್ ಗಳ ಗೆಲುವು ದಾಖಲಿಸಿದೆ.
ಹೈದರಾಬಾದ್ ತಂಡ ಆರಂಭಿಕ ಆಟಗಾರ ಅಲೆಕ್ಸ್ ಹೇಲ್ಸ್ ವಿಕೆಟ್ ಕಳೆದುಕೊಂಡು ಆಘಾತ ಎದುರಿಸಿತಾದರೂ, ಶಿಖರ್ ಧವನ್ ಹಾಗೂ ನಾಯಕ ವಿಲಿಯಮ್ಸನ್ ಜೊತೆಯಾಟ ಹೈದರಾಬಾದ್ ತಂಡ ರನ್ ವೇಗವನ್ನು ಹೆಚ್ಚಿಸಿ ತಂಡದ ಗೆಲುವಿಗೆ ಕಾರಣವಾಯಿತು. 
ಆಕರ್ಷಕ ಇನ್ನಿಂಗ್ಸ್ ಕಟ್ಟಿದ ಶಿಖರ್ ಧವನ್ 50 ಎಸೆತಗಳಲ್ಲಿ 92 ರನ್ ಗಳಿಸಿದರೆ ಹಾಗೂ ವಿಲಿಯಮ್ಸನ್ 53 ಎಸೆತಗಳಲ್ಲಿ 83 ರನ್ ಗಳಿಸಿದರು, ಲಯಕಂಡುಕೊಳ್ಳುವಲ್ಲಿ ಯಡವುತ್ತಿದ್ದ ಶಿಖರ್ ಧವನ್ ಕೇವಲ 30 ಎಸೆತಗಳಲ್ಲಿಯೇ ಅರ್ಧಶತಕ ಗಳಿಸುವ ಮೂಲಕ ಈ ಪಂದ್ಯದಲ್ಲಿ ಲಯ ಕಂಡುಕೊಂಡರು.
ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಡೆಲ್ಲಿ ಡೇರ್‌ಡೆವಿಲ್ಸ್ ತಂಡ ರಿಷಭ್ ಪಂತ್ ಅವರ ಆಕರ್ಷಕ ಶತಕ ( 63 ಎಸೆತಗಳಲ್ಲಿ 128 ರನ್, ನಾಟ್ ಔಟ್) ದ ನೆವಿನೊಂದಿಗೆ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 187 ರನ್‌ಗಳ ಬೃಹತ್ ಮೊತ್ತ ಗಳಿಸಿತು. ಆದರೆ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಬೌಲಿಂಗ್ ವೈಫಲ್ಯದಿಂದಾಗಿ ಹೈದರಾಬಾದ್ ತಂಡದ ಎದುರು ಡೆಲ್ಲಿ ಡೇರ್ ಡೆವಿಲ್ಸ್ ತಂಡ ಸೋಲು ಕಂಡಿತು. ಸ್ಕೋರ್ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ