ಎಬಿ ಡಿವಿಲಿಯರ್ಸ್ 
ಕ್ರಿಕೆಟ್

ಸತತ ಸೋಲಿನಿಂದ ನಿರಾಶರಾಗಿರುವ ಆರ್‌ಸಿಬಿ ಅಭಿಮಾನಿಗಳಿಗೆ ಎಬಿ ಡಿವಿಲಿಯರ್ಸ್ ವಿಶೇಷ ಸಂದೇಶ!

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಕಳಪೆ ಪ್ರದರ್ಶನ ನೀಡುತ್ತಿದೆ. ಇನ್ನು ಟೂರ್ನಿಯಲ್ಲಿ...

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಕಳಪೆ ಪ್ರದರ್ಶನ ನೀಡುತ್ತಿದೆ. ಇನ್ನು ಟೂರ್ನಿಯಲ್ಲಿ ತಂಡ ಫ್ಲೇ-ಆಫ್ ಪ್ರವೇಶಿಸಲಿದೆಯೇ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. 
ಆರ್ಸಿಬಿ ಆಡಿರುವ 10 ಪಂದ್ಯಗಳ ಪೈಕಿ 3 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಇನ್ನು ಉಳಿದಿರುವ 4 ಪಂದ್ಯಗಳು ತಂಡಕ್ಕೆ ಮಾಡು ಇಲ್ಲವೆ ಮಡಿ ಪಂದ್ಯಗಳಾಗಿದೆ. ನಾಲ್ಕು ಪಂದ್ಯಗಳ ಗೆಲುವಿನ ಜತೆಗೆ ಅದೃಷ್ಟದ ಬೆಂಬಲವೂ ಸಿಗಬೇಕು. ಅಂದರೆ ಆರ್ಸಿಬಿ ಫ್ಲೇ ಆಫ್ ಸಾಧ್ಯತೆಯು ಇತರೆ ಪಂದ್ಯಗಳ ಫಲಿತಾಂಶದಲ್ಲೂ ಅವಲಂಬಿಸಿರಲಿದೆ. 
ಇನ್ನು ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಈ ನಡುವೆ ಮುಂದಿನ ನಾಲ್ಕು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. 
ಆರ್ಸಿಬಿ ತಂಡ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಶನಿವಾರ ನಿರ್ಣಾಯಕ ಪಂದ್ಯವನ್ನಾಡುತ್ತಿದ್ದು ಈ ನಡುವೆ ಅಭಿಮಾನಿಗಳಿಗೆ ವಿಲಿಯರ್ಸ್ ಸಂದೇಶವನ್ನು ರವಾನಿಸಿದ್ದಾರೆ. 
ಐಪಿಎಲ್ 11ನೇ ಆವೃತ್ತಿಯಲ್ಲಿ ಆರ್ಸಿಬಿ ತಂಡ ಕಳಪೆ ಪ್ರದರ್ಶನ ನೀಡುತ್ತಿರುವುದನ್ನು ಒಪ್ಪಿಕೊಂಡಿರುವ ಎಬಿಡಿ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡಿಲ್ಲ. ಆದರೆ ಮುಂದಿನ ನಾಲ್ಕು ಪಂದ್ಯಗಳಲ್ಲೂ ಶ್ರೇಷ್ಠ ಪ್ರದರ್ಶನ ನೀಡುವ ನಂಬಿಕೆಯನ್ನು ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!