ಪ್ರೀತಿ ಜಿಂಟಾ, ವೀರೇಂದ್ರ ಸೆಹ್ವಾಗ್ 
ಕ್ರಿಕೆಟ್

ರಾಜಸ್ಥಾನ ವಿರುದ್ಧದ ಸೋಲು ಪ್ರೀತಿ ಜಿಂಟಾ ಮತ್ತು ಸೆಹ್ವಾಗ್ ನಡುವೆ ವೈಮನಸ್ಸಿಗೆ ಕಾರಣವಾಯ್ತಾ?

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ರಾಜಸ್ತಾನ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸೋಲು ತಂಡದ...

ಮುಂಬೈ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ರಾಜಸ್ತಾನ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸೋಲು ತಂಡದ ಮೆಂಟರ್ ವೀರೇಂದ್ರ ಸೆಹ್ವಾಗ್ ಹಾಗೂ ಸಹ ಮಾಲೀಕ ಪ್ರೀತಿ ಜಿಂಟಾ ನಡುವೆ ವೈಮನಸ್ಸಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. 
ರಾಜಸ್ತಾನದ ವಿರುದ್ಧ ಪಂದ್ಯದಲ್ಲಿ ಸುಲಭ ಮೊತ್ತವನ್ನು ಬೆನ್ನಟ್ಟಲು ತಂಡ ವಿಫಲವಾಗಲು ಮೆಂಟರ್ ಸೆಹ್ವಾಗ್ ಅವರ ನಿರ್ಧಾರವೇ ಕಾರಣ ಎಂದು ಪ್ರೀತಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. 
ಈ ಪಂದ್ಯದಲ್ಲಿ ನಾಯಕ ಅಶ್ವಿನ್ ಅವರಿಗೆ ಬ್ಯಾಟಿಂಗ್ ನಲ್ಲಿ ಮುಂಬಡ್ತಿ ನೀಡಿ ನಂಬರ್ 3ನೇ ಸ್ಥಾನದಲ್ಲಿ ಕಳಿಸಲಾಗಿತ್ತು. ಆದರೆ ಪಂದ್ಯದಲ್ಲಿ ಅಶ್ವಿನ್ ಶೂನ್ಯಕ್ಕೆ ಔಟಾಗಿದ್ದು ಎಲ್ಲ ಲೆಕ್ಕಾಚಾರಗಳು ತಲೆ ಕೆಳಗಾಗಿದ್ದವು. ಸದ್ಯ ಪಂದ್ಯದ ಫಲಿತಾಂಶದಿಂದ ಪ್ರೀತಿ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ. 
ಈ ಕುರಿತು ಮಾಧ್ಯಮಗಳು ಸೆಹ್ವಾಗ್ ಮತ್ತು ಪ್ರೀತಿ ಜಿಂಟಾ ಅವರ ಪ್ರತಿಕ್ರಿಯೆ ಕೇಳಿದ್ದಾಗ ಇಬ್ಬರು ಈ ಕುರಿತು ಮಾತನಾಡಲು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video