ಪ್ರಶಸ್ತಿ ಗೆದ್ದೆ ಚೆನ್ನೈ 'ಸೂಪರ್ ಕಿಂಗ್ಸ್' 
ಕ್ರಿಕೆಟ್

ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 2018ರ 'ಚಾಂಪಿಯನ್ಸ್'

ತೀವ್ರ ಕುತೂಹಲ ಕೆರಳಿಸಿದ್ದ ಐಪಿಎಲ್ 2018ರ ಫೈನಲ್ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿ, ಐಪಿಎಲ್ ಪ್ರಶಸ್ತಿಗೆ ಮುತ್ತಿಟ್ಟಿದೆ.

ಮುಂಬೈ: ತೀವ್ರ ಕುತೂಹಲೆ ಕೆರಳಿಸಿದ್ದ ಐಪಿಎಲ್ 2018ರ ಫೈನಲ್ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿ, ಐಪಿಎಲ್ ಪ್ರಶಸ್ತಿಗೆ ಮುತ್ತಿಟ್ಟಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆದ ಪೈನಲ್ ಹಣಾಹಣಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ನೀಡಿದ 179 ರನ್ ಗಳ ಸವಾಲಿನ ಗುರಿಯನ್ನು ಮೆಟ್ಟಿನಿಂತ ಧೋನಿ ಪಡೆ ಭರ್ಜರಿ ಗೆಲುವು ದಾಖಲಿಸಿತು. ಚೆನ್ನೈ ಗೆಲುವಿನಲ್ಲಿ ತಂಡದ ಸ್ಫೋಟಕ ಬ್ಯಾಟ್ಸಮನ್ ಶೇನ್ ವಾಟ್ಸನ್ ಮಹತ್ತರ ಪಾತ್ರ ವಹಿಸಿದರು. ತಮ್ಮ ಭರ್ಜರಿ ಶತಕದ ಮೂಲಕ ವಾಟ್ಸನ್ ತಂಡಕ್ಕೆ 8 ವಿಕೆಟ್ ಗಳ ಭರ್ಜರಿ ಗೆಲುವು ತಂದಿತ್ತರು. ಕೇವಲ 57 ಎಸೆತ ಎದುರಿಸಿದ ವಾಟ್ಸನ್ 8 ಸಿಕ್ಸರ್ ಮತ್ತು 11 ಬೌಂಡರಿಗಳ ನೆರವಿನಿಂದ 117 ರನ್ ಕಲೆ ಹಾಕಿ ಅಜೇಯರಾಗಿ ಉಳಿದರು.
ಅಂತಿಮ ಓವರ್ ನಲ್ಲಿ ಅಂಬಾಟಿ ರಾಯುಡು 16 ರನ್ ಗಳಿಸಿ ಗೆಲುವಿನ ಔಪಚಾರಿಕತೆ ಪೂರ್ಣಗೊಳಿಸಿದರು. ಹೈದರಾಬಾದ್ ಪರ ಸಂದೀಪ್ ಶರ್ಮಾ ಮತ್ತು ಕಾರ್ಲೋಸ್ ಬ್ರಾಥ್ ವೇಟ್ ತಲಾ 1 ವಿಕೆಟ್ ಪಡೆದರು.
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 178 ರನ್ ಕಲೆಹಾಕಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT