ಕೇನ್ ವಿಲಿಯಮ್ಸನ್ - ಹೇಂದ್ರ ಸಿಂಗ್ ಧೋನಿ 
ಕ್ರಿಕೆಟ್

ಐಪಿಎಲ್ ಫೈನಲ್: ಟಾಸ್‌ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಫೀಲ್ಡಿಂಗ್‌ ಆಯ್ಕೆ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ 2018ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫೈನಲ್ ಹಣಾಹಣಿ ಆರಂಭವಾಗಿದ್ದು,.....

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ 2018ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫೈನಲ್ ಹಣಾಹಣಿ ಆರಂಭವಾಗಿದ್ದು, ಟಾಸ್ ಗೆದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ, ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೇನ್ ವಿಲಿಯಮ್ಸನ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ಎರಡೂ ತಂಡಗಳು ಬಲಿಷ್ಠವಾಗಿದ್ದು, ಇಂದು ನಡೆಯುತ್ತಿರುವ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಯಾರು ಗೆದ್ದು ಚಾಂಪಿಯನ್ ಆಗ್ತಾರೆ ಎಂಬ ಕುತೂಹಲ ಕೆರಳಿಸಿದೆ. 
ಚೆನ್ನೈ ಸೂಪರ್‌ ಕಿಂಗ್ಸ್‌ ದಾಖಲೆಯ 7ನೇ ಬಾರಿ ಫೈನಲ್‌ ಅಖಾಡದಲ್ಲಿ ಕಾಣಿಸಿಕೊಂಡಿದ್ದು, 2010 ಹಾಗೂ 2011ರಲ್ಲಿ ಸತತ ಎರಡು ಬಾರಿ ಚಾಂಪಿಯನ್‌ ಆಗಿತ್ತು. ಆ ನಂತರ ಸಿಎಸ್‌ಕೆಗೆ ಪ್ರಶಸ್ತಿ ಮರೀಚಿಕೆಯಾಗಿ ಉಳಿದಿದೆ. 
ಅಂಕಪಟ್ಟಿಯಲ್ಲಿ ಮೊದಲೆರೆಡು ಸ್ಥಾನಗಳಲ್ಲಿದ್ದ ಹೈದರಾಬಾದ್ ಮತ್ತು ಚೆನ್ನೈ ನಡುವೆ ನಡೆದ ಮೊದಲನೇ ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ತಂಡ 2 ವಿಕೆಟ್ ಗಳಿಂದ ಭರ್ಜರಿ ಜಯಗಳಿಸಿತ್ತು. ಇದರಿಂದಾಗಿ ಚೆನ್ನೈ ತಂಡಕ್ಕೆ ಗೆಲುವಿನ ಆಶಾಭಾವ ಹೆಚ್ಚಿದೆ.
ಇನ್ನು ಹೈದರಾಬಾದ್ ತಂಡದಲ್ಲಿ ರಶೀದ್ ಖಾನ್ ಸ್ಪಿನ್ ದಾಳಿ ತಂಡಕ್ಕೆ ಆನೆ ಬಲ ನೀಡಿದೆ. ಹೀಗೆ ಉಭಯ ತಂಡಗಳು ಬಲಿಷ್ಠ ಆಟಗಾರರನ್ನು ಹೊಂದಿದ್ದು ಇಬ್ಬರ ನಡುವೆ ರೋಚಕ ಹಣಾಹಣಿ ನಡೆಯುವ ಸಾಧ್ಯತೆ ಇದೆ.
ಹೈದರಾಬಾದ್ ತಂಡ ಆಡಿರುವ 16 ಪಂದ್ಯಗಳ ಪೈಕಿ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ 15 ಪಂದ್ಯಗಳ ಪೈಕಿ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಅತಿಯಾಗಿ ಭಯ ಹುಟ್ಟಿಸಬೇಡಿ, ನಿಮ್ಮ ಹೆದರಿಕೆಗೆ ಬಗ್ಗಲ್ಲ: ಗಾಯದ Video ಶೇರ್​ ಮಾಡಿ ಪೊಲೀಸರಿಗೆ ಆಮೀರ್ ಖಾನ್ ಸೊಸೆ ತಿರುಗೇಟು!

CJP ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್​ಗೆ ಬಿಗ್ ಶಾಕ್; ಗಡಿಪಾರು ಸಾಧ್ಯತೆ

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಹಾರ್ಮೊಜ್ ಮೇಲೆ ಈಗಲೂ ನಮ್ಮದೇ ನಿಯಂತ್ರಣ: ವಾಸ್ತವಕ್ಕೂ ಅಮೆರಿಕ ಹೇಳಿಕೆಗಳಿಗೂ ತಾಳೆಯಾಗುವುದಿಲ್ಲ- ಇರಾನ್