ಐಸಿಸಿ ಮಹಿಳಾ ವಿಶ್ವಕಪ್ ಟಿ20 ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾ ಮಹಿಳಾ ತಂಡ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
ಗಯಾನಾದ ಪ್ರಾವಿಡೆನ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಮಹಿಳಾ ತಂಡದ ಪರ ಹರ್ಮನ್‌ಪ್ರೀತ್ ಕೌರ್(103) ವೇಗದ ಎರಡನೇ ಶತಕವನ್ನು ಸಿಡಿಸಿದರು. ಪರಿಣಾಮ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 194 ರನ್ ಪೇರಿಸಿತು.
ಭಾರತ ನೀಡಿದ 195 ರನ್ ಗಳ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 160 ರನ್ ಪೇರಿಸಿ 34 ರನ್ ಗಳಿಂದ ಸೋಲು ಕಂಡಿತು.
ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಹೇಮಲತಾ ಹಾಗೂ ಪೂನಂ ಯಾದವ್ ತಲಾ 3 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics