ವಿರಾಟ್ ಕೊಹ್ಲಿ 
ಕ್ರಿಕೆಟ್

ವಿರಾಟ್ ಕೊಹ್ಲಿ ಮೈದಾನದಲ್ಲಿ ಸುಮ್ಮನಿದ್ದರೆ ಅದು ಬಹುದೊಡ್ಡ ಅಚ್ಚರಿ; ಕೊಹ್ಲಿಯನ್ನು ಅಣಕಿಸಿದ ಆಸೀಸ್ ವೇಗಿ!

ಸ್ಲೆಡ್ಜಿಂಗ್ ಮೂಲಕ ಎದುರಾಳಿ ತಂಡದ ಆಟಗಾರರ ಮನಸ್ಥೈರ್ಯವನ್ನು ಕುಗ್ಗಿಸುವ ಕುತಂತ್ರ ಮನಸ್ಥಿತಿ ಹೊಂದಿರುವ ಆಸ್ಟ್ರೇಲಿಯಾ ಇದೀಗ ಟೀಂ ಇಂಡಿಯಾ ವಿರುದ್ಧದ ಸರಣಿಗೂ ಮುನ್ನವೇ ಟಾಂಗ್...

ನವದೆಹಲಿ: ಸ್ಲೆಡ್ಜಿಂಗ್ ಮೂಲಕ ಎದುರಾಳಿ ತಂಡದ ಆಟಗಾರರ ಮನಸ್ಥೈರ್ಯವನ್ನು ಕುಗ್ಗಿಸುವ ಕುತಂತ್ರ ಮನಸ್ಥಿತಿ ಹೊಂದಿರುವ ಆಸ್ಟ್ರೇಲಿಯಾ ಇದೀಗ ಟೀಂ ಇಂಡಿಯಾ ವಿರುದ್ಧದ ಸರಣಿಗೂ ಮುನ್ನವೇ ಟಾಂಗ್ ನೀಡಲು ಶುರು ಮಾಡಿದ್ದಾರೆ. 
ಆಸೀಸ್ ವಿರುದ್ಧದ ಸರಣಿಗಾಗಿ ಟೀಂ ಇಂಡಿಯಾ ಅದಾಗಲೇ ಆಸ್ಟ್ರೇಲಿಯಾಗೆ ತೆರಳಿದ್ದು ಭರ್ಜರಿ ತಾಲೀಮಿನಲ್ಲಿ ತೊಡಗಿದ್ದಾರೆ. ಇನ್ನು ಮೈದಾನದಲ್ಲಿ ಸಂಯಮ ಕಳೆದುಕೊಳ್ಳದಂತೆ ಬಿಸಿಸಿಐ ತಂಡದ ನಾಯಕ ವಿರಾಟ್ ಕೊಹ್ಲಿಗೆ ಸೂಚಿಸಿದೆ. 
ಇನ್ನು ತಾವು ಆಸ್ಟ್ರೇಲಿಯಾ ಪ್ರವಾಸಲ್ಲಿ ಸಂಯಮದಿಂದ ವರ್ತಿಸುವುದಾಗಿ ಹೇಳಿಕೆ ನೀಡಿದ್ದ ವಿರಾಟ್ ಕೊಹ್ಲಿ ಆಟದ ಮೇಲಷ್ಟೇ ನನ್ನ ಗಮನ ಎಂಬುದಾಗಿ ಹೇಳಿದ್ದರು. ಕೊಹ್ಲಿಯ ಈ ಹೇಳಿಕೆಯನ್ನೇ ಅಣಕಿಸಿರುವ ಆಸೀಸ್ ವೇಗಿ ಪ್ಯಾಟ್ ಕಮಿನ್ಸ್ ಒಂದು ವೇಳೆ ಕೊಹ್ಲಿ ಮೈದಾನದಲ್ಲಿ ಯಾವುದೇ ರೀತಿಯಲ್ಲೂ ಉದ್ವೇಗಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಿದರೆ ಅದು ಅತ್ಯಂತ ದೊಡ್ಡ ಅಚ್ಚರಿ ಎಂದು ಹೇಳಿ ಕೊಹ್ಲಿ ಕಾಲೆಳೆದಿದ್ದಾರೆ. 
ನವೆಂಬರ್ 21ರಂದು ಬ್ರಿಸ್ಬೇನ್ ನಲ್ಲಿ ನಡೆಯಲಿರುವ ಟಿ20 ಪಂದ್ಯದ ಮೂಲಕ ಭಾರತ-ಆಸ್ಟ್ರೇಲಿಯಾ ಕ್ರಿಕೆಟ್ ಸರಣಿ ಆರಂಭಗೊಳ್ಳಲಿದೆ. ನಂತರ ಟೆಸ್ಟ್ ಸರಣಿ ಹಾಗೂ ಏಕದಿನ ಸರಣಿಗಳು ನಡೆಯಲಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ