ಆಸೀಸ್ ತಂಡ 
ಕ್ರಿಕೆಟ್

ಮೊದಲ ಟಿ-20: ಭಾರತದ ವಿರುದ್ಧ ಆಸೀಸ್ ಗೆ 4 ರನ್ ಗಳ ರೋಚಕ ಗೆಲುವು

ಮೊದಲ ಟಿ-20 ಪಂದ್ಯದಲ್ಲಿ ಪ್ರವಾಸಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಡಕ್ವರ್ತ್ ಲೂವಿಸ್ ನಿಯಮದಡಿಯಲ್ಲಿ ನಾಲ್ಕು ರನ್ ಗಳ ರೋಚಕ ಗೆಲುವು ಸಾಧಿಸಿದೆ.

ಬ್ರಿಸ್ಬೇನ್: ಮೊದಲ ಟಿ-20 ಪಂದ್ಯದಲ್ಲಿ ಪ್ರವಾಸಿ ಭಾರತದ ವಿರುದ್ಧ ಆಸ್ಟ್ರೇಲಿಯಾ  ಡಕ್ವರ್ತ್ ಲೂವಿಸ್ ನಿಯಮದಡಿಯಲ್ಲಿ ನಾಲ್ಕು ರನ್ ಗಳ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ ಆಸೀಸ್ 1-0 ಅಂತರದ ಮುನ್ನಡೆ ದಾಖಲಿಸಿದೆ.
ಇಂದು ಗಬ್ಬಾ ಕ್ರಿಕೆಟ್ ಮೈದಾನದಲ್ಲಿ ನಡೆದ ಮೊದಲ ಟಿ-20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 17 ಓರವ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 158 ರನ್ ಪೇರಿಸಿತ್ತು.
ಇನ್ನು ಮೊದಲ ಇನ್ನಿಂಗ್ಸ್ ನ ಕೊನೆಯಲ್ಲಿ ಮಳೆ ಬಂದಿದ್ದರಿಂದ ಪಂದ್ಯವನ್ನು 17 ಓವರ್ ಗಳಿಗೆ ಅಂತಿಮಗೊಳಿಸಿ, ಡಕ್ವರ್ತ್ ನಿಯಮದ ಪ್ರಕಾರ ಭಾರತಕ್ಕೆ 17 ಓವರ್ ಗಳಲ್ಲಿ 174 ರನ್ ಮೊತ್ತದ ಗುರಿ ನೀಡಲಾಯಿತು. 
174 ರನ್ ಗಳ ಬೃಹತ್ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ, ಶಿಖರ್ ಧವನ್ (76) ಬಿರುಸಿನ ಅರ್ಧಶತಕದ ಹೊರತಾಗಿಯೂ 17 ಓರವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 169 ರನ್ ಗಳಿಸುವ ಮೂಲಕ ಸೋಲು ಒಪ್ಪಿಕೊಂಡಿತು.  
ಆಸ್ಟ್ರೇಲಿಯಾ ಪರ ಜಂಪಾ ಮತ್ತು ಸ್ಟೋನೀಸ್​ ತಲಾ ಎರಡೆರಡು ವಿಕೆಟ್​ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT