ಸಂಗ್ರಹ ಚಿತ್ರ 
ಕ್ರಿಕೆಟ್

'ಅಂಪೈರ್ ಹಾಕಿದ 'ಜಿಎಸ್`ಟಿ' ದುಬಾರಿ ಆಯ್ತು'; ಆಸಿಸ್ ವಿರುದ್ಧ ಟೀಂ ಇಂಡಿಯಾ ಸೋಲಿನ ಕುರಿತು ಸೆಹ್ವಾಗ್ ಟ್ವೀಟ್

ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದ ಸೋಲಿನ ಬೆನ್ನಲ್ಲೇ ಟ್ವೀಟ್ ಮಾಡಿರುವ ಭಾರತ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ 'ಅಂಪೈರ್ ಹಾಕಿದ 'ಜಿಎಸ್`ಟಿ' ದುಬಾರಿ ಆಯ್ತು' ಎಂದು ಟ್ವೀಟ್ ಮಾಡಿದ್ದಾರೆ.

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದ ಸೋಲಿನ ಬೆನ್ನಲ್ಲೇ ಟ್ವೀಟ್ ಮಾಡಿರುವ ಭಾರತ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ 'ಅಂಪೈರ್ ಹಾಕಿದ 'ಜಿಎಸ್`ಟಿ' ದುಬಾರಿ ಆಯ್ತು' ಎಂದು ಟ್ವೀಟ್ ಮಾಡಿದ್ದಾರೆ.
ನಿನ್ನೆ ಬ್ರಿಸ್ಬೇನ್ ನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 4 ರನ್ ಗಳ ವಿರೋಚಿತ ಸೋಲು ಅನುಭವಿಸಿತು. ಮಳೆಯಿಂದಾಗಿ ಕೇವಲ 17 ಓವರ್ ಗಳಿಗೇ ಸೀಮಿತವಾದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 17 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 158 ರನ್ ಕಲೆ ಹಾಕಿತು. ಆದರೆ ಮಳೆಯಿಂದಾಗಿ ಪಂದ್ಯಕ್ಕೆ ಡಕ್ವರ್ತ್ ಲೂಯಿಸ್ ನಿಯಮ ಅಳವಡಿಸಿದ ಅಂಪೈರ್ ಗಳು ಭಾರತಕ್ಕೆ ಗೆಲ್ಲಲು 173 ರನ್ ಗಳ ಗುರಿ ನೀಡಿದರು.
ಆದರೆ ಭಾರತ 17 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 169 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಅಂತಿಮ ಓವರ್ ನಲ್ಲಿ ಕೃಣಾಲ್ ಪಾಂಡ್ಯಾ ಮತ್ತು ದಿನೇಶ್ ಕಾರ್ತಿಕ್ ರ ಸತತ ವಿಕೆಟ್ ಭಾರತಕ್ಕೆ ಮುಳುವಾಯಿತು. ಅಂತಿಮವಾಗಿ ಆಸಿಸ್ ಬಳಗ ಕೇವಲ 4 ರನ್ ಗಳ ಅಂತರದಲ್ಲಿ ಗೆದ್ದು ಸರಣಿ ಶುಭಾರಂಭ ಮಾಡಿತು.
ಇನ್ನು ಪಂದ್ಯ ಮುಕ್ತಾಯದ ಬಳಿಕ ಟ್ವೀಟ್ ಮಾಡಿದ ವಿರೇಂದ್ರ ಸೆಹ್ವಾಗ್ ತಮ್ಮ ಎಂದಿನ ಶೈಲಿಯಂತೇ ಟ್ವೀಟ್ ಮಾಡಿದ್ದು, ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡಕ್ಕಿಂತಲೂ ಹೆಚ್ಚು ರನ್​ಗಳಿಕೆ ಮಾಡಿದ್ರೂ ಸೋಲು ಕಾಣುವಂತಾಯಿತು. ಆಸೀಸ್ ರನ್ ಮೇಲೆ ಹೆಚ್ಚುವರಿಯಾಗಿ GST ಅಳವಡಿಕೆ ಮಾಡಲಾಗಿತ್ತು ಎಂದು ಹಾಸ್ಯ ಮಾಡಿದ್ದಾರೆ. ಇದೇ ವೇಳೆ ಟೀಂ ಇಂಡಿಯಾ ಬ್ಯಾಟಿಂಗ್​ ವೈಖರಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸೆಹ್ವಾಗ್ ರ ಈ ಟ್ವೀಟ್ ಇದೀಗ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ