3ನೇ ಟಿ20: ಆಸ್ಟ್ರೇಲಿಯಾ ಬ್ಯಾಟಿಂಗ್, ಮುಖಭಂಗ ತಪ್ಪಿಸಿಕೊಳ್ಳುತ್ತಾ ಟೀಂ ಇಂಡಿಯಾ!
ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಸಿಡ್ನಿ: ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಸಿಡ್ನಿಯಲ್ಲಿ ನಡೆಯುತ್ತಿರುವ ಮೂರನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಬ್ಯಾಟಿಂಗ್ ಮಾಡುತ್ತಿದೆ. ಆರಂಭಿಕರಾಗಿ ಕಣಕ್ಕಿಳಿದಿರುವ ಆರೋನ್ ಪಿಂಚ್ ಅಜೇಯ 7 ಹಾಗೂ ಶಾರ್ಟ್ 6 ರನ್ ಗಳಿಸಿ ಆಡುತ್ತಿದ್ದಾರೆ.
ಆಸ್ಟ್ರೇಲಿಯಾ ಎರಡು ಓವರ್ ಮುಕ್ತಾಯಕ್ಕೆ ವಿಕೆಟ್ ನಷ್ಟವಿಲ್ಲದೆ 16 ರನ್ ಗಳಿಸಿದೆ.
ಟೀಂ ಇಂಡಿಯಾ ತಂಡ
ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ಕೆ.ಎಲ್. ರಾಹುಲ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಕೃಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಜಸ್ಪ್ರೀತ್ ಬ್ರೂಮಾ, ಖಲೀಲ್ ಅಹ್ಮದ್ ಇದ್ದಾರೆ.
ಆಸ್ಟ್ರೇಲಿಯಾ ತಂಡ ತಂಡ
ಅರೊನ್ ಪಿಂಚ್, ಡಿ ಆರ್ಕಿ ಸಾರ್ಟ್ , ಕ್ರಿಸ್ ಲ್ಯಾನ್, ಗ್ಲೆನ್ ಮ್ಯಾಕ್ಸ್ ವೆಲ್, ಮಾರ್ಕಸ್ ಸ್ಟೊಯಿನಿಸ್, ಬೆನ್ ಮ್ಯಾಕ್ ಡಾರ್ಮೊಟೋ, ಅಲೆಕ್ಸ್ ಕ್ಯಾರಿ, ನಾಥನ್ ಕೌಟರ್ ನೈಲ್, ಆಂಡ್ರ್ಯೂ ಟೈ, ಅಡಾಮ್ ಜಾಂಪಾ, ಬೆಹೆಂಡ್ರೋರ್ಫ್ ಇದ್ದಾರೆ.