ಹರ್ಮನ್ ಪೀತ್ ಕೌರ್ - ಮಿಥಾಲಿ ರಾಜ್ 
ಕ್ರಿಕೆಟ್

ಪ್ರತ್ಯೇಕವಾಗಿ ಬಿಸಿಸಿಐ ಸಿಇಒ, ಜಿಎಂ ಭೇಟಿ ಮಾಡಿದ ಮಿಥಾಲಿ, ಹರ್ಮನ್

ಟಿ-20 ಮಹಿಳಾ ವಿಶ್ವಕಪ್‌ ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಸೋಲು ಅನುಭವಿಸಿದ ಟಿ-20 ಮಹಿಳಾ ತಂಡದ ನಾಯಕಿ...

ನವದೆಹಲಿ: ಟಿ-20 ಮಹಿಳಾ ವಿಶ್ವಕಪ್‌ ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಸೋಲು ಅನುಭವಿಸಿದ ಟಿ-20 ಮಹಿಳಾ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಹಾಗೂ ಏಕದಿನ ಪಂದ್ಯದ ನಾಯಕಿ ಮಿಥಾಲಿ ರಾಜ್‌ ಅವರು ಸೋಮವಾರ ಪ್ರತ್ಯೇಕವಾಗಿ ಬಿಸಿಸಿಐ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಟಿ-20 ಮಹಿಳಾ ವಿಶ್ವಕಪ್‌ ಸೆಮಿ ಫೈನಲ್ ನಲ್ಲಿ ಮಿಥಾಲಿ ರಾಜ್ ಅವರನ್ನು ಹೊರಗಿಟ್ಟಿದ್ದಕ್ಕೆ ಭಾರೀ ವಿವಾದ ಸೃಷ್ಟಿಯಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಬಿಸಿಸಿಐ ಸಿಇಒ ರಾಹುಲ್ ಜೊಹ್ರಿ  ಹಾಗೂ ಜಿಎಂ ಸಬಾ ಕರೀಂ ಅವರನ್ನು ಭೇಟಿ ಮಾಡಿದ್ದಾರೆ.
ಹೌದು, ನಾವು ಮಿಥಾಲಿ, ಹರ್ಮನ್ ಹಾಗೂ ತಂಡದ ವ್ಯವಸ್ಥಾಪಕಿ ತೃಪ್ತಿ ಭಟ್ಟಾಚಾರ್ಯ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ್ದೇವೆ. ಅವರಿಂದ ಅಭಿಪ್ರಾಯಗಳನ್ನು ಪಡೆದಿದ್ದು, ಎಲ್ಲವನ್ನು ಪರಿಶೀಲಿಸುತ್ತೇವೆ ಎಂದು ಜೊಹ್ರಿ ಪಿಟಿಐಗೆ ತಿಳಿಸಿದ್ದಾರೆ.
ಸಭೆಯ ವಿವರಗಳನ್ನು ನೀಡಲು ನಿರಾಕರಿಸಿದ ಜೊಹ್ರಿ, ಆಟಗಾರ್ತಿಯರೊಂದಿಗೆ ಏನೇನು ಚರ್ಚಿಸಲಾಯಿತು ಅಂತ ಮಾತ್ರ ಕೇಳಬೇಡಿ ಎಂದರು.
ಭಾರತ ಮಹಿಳಾ ತಂಡವು ವಿಶ್ವಕಪ್ ಟಿ20 ಟೂರ್ನಿಯಲ್ಲಿ ಸೆಮಿಫೈನಲ್’ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತು ಕೂಟದಿಂದ ಹೊರಬಿದ್ದಿತ್ತು. ಉತ್ತಮ ಫಾರ್ಮ್’ನಲ್ಲಿದ್ದ ಮಿಥಾಲಿ ರಾಜ್ ಅವರನ್ನು ಸೆಮಿಫೈನಲ್ ಪಂದ್ಯದಿಂದ ಕೈಬಿಡಲಾಗಿತ್ತು. ನೀರಸ ಬ್ಯಾಟಿಂಗ್ ಪ್ರದರ್ಶಿಸಿದ್ದ ಭಾರತ ಕೇವಲ 112 ರನ್ ಬಾರಿಸಿ ಆಲೌಟ್ ಆಗಿತ್ತು. ಸುಲಭ ಗುರಿ ಬೆನ್ನತ್ತಿದ ಇಂಗ್ಲೆಂಡ್ 8 ವಿಕೆಟ್’ಗಳ ಭರ್ಜರಿ ಜಯ ದಾಖಲಿಸಿತ್ತು.
ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಮಣಿಸಿ ಆಸ್ಟ್ರೇಲಿಯಾ ದಾಖಲೆಯ 4ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!