ಆಡಮ್ ಗಿಲ್ ಕ್ರೀಸ್ಟ್ 
ಕ್ರಿಕೆಟ್

ಟೆಸ್ಟ್ ಸರಣಿ ಗೆಲ್ಲಲು ವಿರಾಟ್ ಕೊಹ್ಲಿಗೆ ಇತರ ಬ್ಯಾಟ್ಸ್ ಮನ್ ಗಳ ಬೆಂಬಲ ಅಗತ್ಯ- ಆಡಮ್ ಗಿಲ್ ಕ್ರಿಸ್ಟ್

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಾರ್ಡರ್ - ಗಾವಸ್ಕರ್ ಟ್ರೋಫಿ ಗೆಲ್ಲಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಉಳಿದ ಬ್ಯಾಟ್ಸ್ ಮನ್ ಗಳು ಬೆಂಬಲ ನೀಡಬೇಕಾದ ಅಗತ್ಯವಿದೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ಯಾಪ್ಟನ್ ಆಡಮ್ ಗಿಲ್ ಕ್ರಿಸ್ಟ್ ಹೇಳಿದ್ದಾರೆ.

ಸಿಡ್ನಿ:  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಾರ್ಡರ್ - ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿ ಗೆಲ್ಲಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಉಳಿದ ಬ್ಯಾಟ್ಸ್ ಮನ್ ಗಳು  ಬೆಂಬಲ ನೀಡಬೇಕಾದ ಅಗತ್ಯವಿದೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ಯಾಪ್ಟನ್  ಆಡಮ್ ಗಿಲ್ ಕ್ರಿಸ್ಟ್ ಹೇಳಿದ್ದಾರೆ.

ಡಿಸೆಂಬರ್ 6 ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, 2014ರ ಸರಣಿಯಂತೆ ವಿರಾಟ್ ಕೊಹ್ಲಿಯಿಂದ ಮತ್ತೊಂದು ನಿರೀಕ್ಷೆ  ಇಡಲಾಗಿದೆ. ಈ ಬಗ್ಗೆ ಕೆಲ ದಿನಗಳ ಹಿಂದೆ ಕೊಹ್ಲಿ ಜೊತೆ ಮಾತನಾಡಿದ್ದು, ಸಿಡ್ನಿಯಲ್ಲಿ ಅವರ ಬ್ಯಾಟಿಂಗ್ ಎದುರು ನೋಡುತ್ತಿದ್ದೇನೆ. ಒಂದು ವೇಳೆ ಅದು ಹಾಗದಿದ್ದರೆ  ಆಚ್ಚರಿಪಡುವುದಾಗಿ ಗಿಲ್ ಕ್ರೀಸ್ಟ್  ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಟೀಂ ಇಂಡಿಯಾ ಈ ಸರಣಿ ಗೆಲ್ಲಲು ವಿರಾಟ್ ಕೊಹ್ಲಿಗೆ ಉಳಿದ ಬ್ಯಾಟ್ಸ್ ಮನ್ ಗಳ ಬೆಂಬಲ ಅಗತ್ಯವಿದೆ. ಅವರು ಸಹಕರಿಸಿದ್ದರೆ ಉತ್ತಮ ರನ್ ಗಳಿಸಬಹುದಾಗಿದೆ. ಟೆಸ್ಟ್ ಪಂದ್ಯಗಳಲ್ಲಿ ಉತ್ತಮ ರೀತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಬೌಲಿಂಗ್ ದಾಳಿ ನಡೆಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಆಸ್ಟ್ರೇಲಿಯಾ ಬೌಲರ್ ಗಳಿಗೆ ಭಾರತದ  ಎಲ್ಲಾ ಬ್ಯಾಟ್ಸ್ ಮನ್ ಗಳ ಮೇಲೆ ದಾಳಿ ಮಾಡುವ ಸಾಮರ್ಥ್ಯವಿದೆ. ಧೀರ್ಘ ಅವಧಿಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿರುದ್ಧ ತಾಳ್ಮೆಯಿಂದ ಆಟವಾಡಬೇಕಾಗುತ್ತದೆ. ಭಾರತ ಆರಂಭದಲ್ಲಿ ಗೆದ್ದರೂ ನಂತರ ಆಸ್ಟ್ರೇಲಿಯಾದ ತವರೂ ನೆಲದಲ್ಲಿ ಪ್ರಾಬಲ್ಯ ಮೆರೆಯಲು ಸಾಧ್ಯವಿಲ್ಲ ಎಂದು ಗಿಲ್ ಕ್ರೀಸ್ಟ್  ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT