ಕೊಹ್ಲಿಯನ್ನು ಕಟ್ಟಿಹಾಕಲು ನಿಷೇಧಿತ ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್ ಮೊರೆ ಹೋದ ಆಸ್ಟ್ರೇಲಿಯಾ
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ಸ್ಫೋಟಕ ಬ್ಯಾಟಿಂಗ್ ನೋಡಿ ಆಸೀಸಿಗರ ತಲೆಬಿಸಿ ಹೆಚ್ಚಾಗಿದೆ. ಟೆಸ್ಟ್ ಸರಣಿಯಲ್ಲೂ ಕೊಹ್ಲಿ ಇದೇ ರೀತಿ...
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ಸ್ಫೋಟಕ ಬ್ಯಾಟಿಂಗ್ ನೋಡಿ ಆಸೀಸಿಗರ ತಲೆಬಿಸಿ ಹೆಚ್ಚಾಗಿದೆ. ಟೆಸ್ಟ್ ಸರಣಿಯಲ್ಲೂ ಕೊಹ್ಲಿ ಇದೇ ರೀತಿ ಆರ್ಭಟಿಸಿದರೆ ಸರಣಿ ಸೋಲು ಗ್ಯಾರಂಟಿ ಎಂದು ಭಾವಿಸಿರುವ ಆಸ್ಟ್ರೇಲಿಯಾ ನಿಷೇಧಿತ ಆಟಗಾರರಾದ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಮೊರೆ ಹೋಗಿದೆ.
ಚೆಂಡು ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧ ಶಿಕ್ಷೆಯಲ್ಲಿರುವ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಇದೀಗ ತಮ್ಮ ತಂಡದ ಬೌಲರ್ ಗಳಿಗೆ ವಿರಾಟ್ ಕೊಹ್ಲಿಯನ್ನು ಕಟ್ಟಿ ಹಾಕುವ ಕುರಿತು ಕೆಲ ಟಿಪ್ಸ್ ನೀಡಲಿದ್ದಾರೆ.
ಸ್ಟೀವ್ ಸ್ಮಿತ್ ಹಾಗೂ ವಾರ್ನರ್ ಆಸ್ಟ್ರೇಲಿಯಾ ತಂಡದ ಜತೆಗೆ ನೆಟ್ಸ್ ನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಬೌಲಿಂಗ್ ಕೋಚ್ ಮತ್ತು ಬೌಲರ್ ಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಡಿಸೆಂಬರ್ 6ರಿಂದ ಅಡಿಲೇಡ್ ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.