ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಆಸಿಸ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಪೃಥ್ವಿ ಶಾಗೆ ಗಾಯ, ಆಸ್ಪತ್ರೆಗೆ ದಾಖಲು

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತಕಾರಿ ಸುದ್ದಿಯೊಂದು ಎದುರಾಗಿದ್ದು, ಆಸಿಸ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಪಾಲ್ಗೊಂಡಿದ್ದ ಭಾರತದ ಫೃಥ್ವಿ ಶಾ ಗಾಯಗೊಂಡು ಪಂದ್ಯದಿಂದ ಹೊರ ನಡೆದಿದ್ದಾರೆ.

ಸಹಾಯಕರ ನೆರವಿನಿಂದ ಮೈದಾನದಿಂದ ಹೊರಗೆ ಹೋದ ಪೃಥ್ವಿ ಶಾ
Srinivasa Murthy VN
Updated On : 30 Nov 2018, 8:42 am
ಸಿಡ್ನಿ: ಬಹು ನಿರೀಕ್ಷಿತ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತಕಾರಿ ಸುದ್ದಿಯೊಂದು ಎದುರಾಗಿದ್ದು, ಆಸಿಸ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಪಾಲ್ಗೊಂಡಿದ್ದ ಭಾರತದ ಫೃಥ್ವಿ ಶಾ ಗಾಯಗೊಂಡು ಪಂದ್ಯದಿಂದ ಹೊರ ನಡೆದಿದ್ದಾರೆ.
ಈ ಬಗ್ಗೆ ಬಿಸಿಸಿಐ ಟ್ವೀಟ್ ಮಾಡಿದ್ದು, ಪಂದ್ಯದ ವೇಳೆ ಕ್ಯಾಚ್ ಪಡೆಯಲು ಯತ್ನಿಸಿ ಪೃಥ್ವಿಶಾ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಅವರ ಎಡಗಾಲಿನ ಹಿಮ್ಮಡಿಗೆ ಗಾಯವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 
ಆಸ್ಟ್ರೇಲಿಯಾ ಎಲೆವನ್ ತಂಡದ ಆರಂಭಿಕ ಆಟಗಾರ ಮ್ಯಾಕ್ಸ್ ಬ್ರಾಂಟ್ ಅವರು ಸಿಡಿಸಿದ ಚೆಂಡನ್ನು ಪೃಥ್ವಿ ಶಾ ಬೌಂಡರಿ ಗೆರೆ ಬಳಿ ಹಿಡಿಯಲು ಜಂಪ್ ಮಾಡಿದರು. ಈ ವೇಳೆ ಕ್ಯಾಚ್ ಹಿಡಿಯುವಲ್ಲಿ ಯಶಸ್ವಿಯಾದರೂ ಅವರ ಹಿಮ್ಮಡಿಗೆ ಬಲವಾದ ಗಾಯವಾಯಿತು. ಕನಿಷ್ಠ ಪಕ್ಷ ಎದ್ದು ನಿಲ್ಲಲೂ ಸಾಧ್ಯವಾಗದೇ ಪೃಥ್ವಿ ಶಾ ಕಷ್ಟುಪಟ್ಟರು. ಈ ವೇಳೆ ಮೈದಾನಕ್ಕೆ ಆಗಮಿಸಿದ ಫಿಸಿಯೋಗಳು ಅವರನ್ನು ಎತ್ತಿಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿದರು. ಬಳಿಕ ಅವರನ್ನು ಆಸ್ಪತ್ರೆ ದಾಖಲು ಮಾಡಲಾಯಿತು. ಶಾಗೆ ಕಾಲಿನ ಸ್ಕ್ಯಾನಿಂಗ್ ಮಾಡಿಸಲಾಗಿದ್ದು, ಅದರ ವರದಿ ಇನ್ನೂ ಲಭ್ಯವಾಗಿಲ್ಲ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments