ಸುದ್ದಿಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ 
ಕ್ರಿಕೆಟ್

ಹನುಮ ವಿಹಾರಿ, ಪೃಥ್ವಿ ಶಾ ಉತ್ತಮ ಪ್ರದರ್ಶನದಿಂದಾಗಿಯೇ ತಂಡಕ್ಕೆ ಆಯ್ಕೆಯಾಗಿದ್ದಾರೆ: ವಿರಾಟ್ ಕೊಹ್ಲಿ

ಉದಯೋನ್ಮುಖ ಆಟಗಾರರಾದ ಹನುಮ ವಿಹಾರಿ, ಪೃಥ್ವಿ ಶಾ ಉತ್ತಮ ಪ್ರದರ್ಶನದಿಂದಾಗಿಯೇ ತಂಡಕ್ಕೆ ಆಯ್ಕೆಯಾಗಿದ್ದಾರೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ನವದೆಹಲಿ: ಉದಯೋನ್ಮುಖ ಆಟಗಾರರಾದ ಹನುಮ ವಿಹಾರಿ, ಪೃಥ್ವಿ ಶಾ ಉತ್ತಮ ಪ್ರದರ್ಶನದಿಂದಾಗಿಯೇ ತಂಡಕ್ಕೆ ಆಯ್ಕೆಯಾಗಿದ್ದಾರೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಟೂರ್ನಿ ಆರಂಭಕ್ಕೂ ಮುನ್ನ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ಟೀಂ ಇಂಡಿಯಾ ಬೆಂಚ್ ಸ್ಟ್ರೆಂಥ್ ಬಲಿಷ್ಟಗೊಳಿಸುವುದು ನಮ್ಮ ಗುರಿಯಾಗಿದೆ. ಇದೇ ಕಾರಣಕ್ಕೆ ಹಲವು ಆಯ್ಕೆಗಳು ನಮ್ಮ ಮುಂದಿವೆ. ಹನುಮ ವಿಹಾರಿ ಮತ್ತು ಪೃಥ್ವಿ ಶಾ ಉತ್ತಮ ಪ್ರದರ್ಶನದಿಂದಾಗಿಯೇ ತಂಡಕ್ಕೆ ಆಯ್ಕೆಯಾಗಿದ್ದಾರೆ ಎಂದು ಹೇಳುವ ಮೂಲಕ ಕೊಹ್ಲಿ ಹನುಮ ವಿಹಾರಿ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಹನುಮವಿಹಾರಿ, ಪೃಥ್ವಿ ಶಾ, ಮಾಯಂಕ್ ಅಗರ್ವಾಲ್ ದೇಶೀಯ ಕ್ರಿಕೆಟ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಈ ಅವಕಾಶವನ್ನು ಅವರ ಒತ್ತಡ ಎಂದು ತಿಳಿಯದೇ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಆ ಮೂಲಕ ತಂಡದಲ್ಲಿ ತಮ್ಮ ಸ್ಥಾನ ಗಟ್ಟಿಗೊಳಿಸಿಕೊಂಡು ತಂಡಕ್ಕಾಗಿ ಸುಧೀರ್ಘ ಸಮಯ ಆಡಬೇಕು ಎಂದು ಕೊಹ್ಲಿ ಹೇಳಿದರು.
ಅಂತೆಯೇ ಆರಂಭಿಕ ಕ್ರಮಾಂಕದಲ್ಲಿ ಸಾಕಷ್ಟು ಮಂದಿ ಉದಯೋನ್ಮುಖ ಆಟಗಾರರು ಆಡುತ್ತಿದ್ದು, ಅವರ ಕೌಶಲ್ಯ ಪ್ರದರ್ಶನಕ್ಕೆ ವಿಂಡೀಸ್ ಪ್ರವಾಸ ಉತ್ತಮ ವೇದಿಕೆಯಾಗಿರಲಿದೆ ಎಂದು ಭಾವಿಸುತ್ತೇನೆ ಎಂದು ಕೊಹ್ಲಿ ಹೇಳಿದ್ದಾರೆ.
ಇನ್ನು ಅಂಡರ್ 19 ವಿಶ್ವಕಪ್ ಗೆದ್ದ ಅಂಡರ್ 19 ತಂಡದ ನಾಯಕರಾಗಿದ್ದ ಪೃಥ್ವಿ ಶಾ, ಓವಲ್ ನಲ್ಲಿ ಪದಾರ್ಪಣೆ ಪಂದ್ಯದಲ್ಲೇ ಆರ್ಧಶತಕ ಸಿಡಿಸಿ ಭಾರತದ ಮಾನ ಕಾಪಾಡಿದ್ದ ಹನುಮ ವಿಹಾರಿ ಮತ್ತು ಮಾಯಂಕ್ ಅಗರ್ವಾಲ್ ತಂಡಕ್ಕೆ ಆಯ್ಕೆಯಾಗಿದ್ದು, ಶಿಖರ್ ಧವನ್ ರನ್ನು ತಂಡದಿಂದ ಕೈಬಿಡಲಾಗಿದೆ. ಅಂತೆಯೇ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ತಂಡದ ಪ್ರಮುಖ ವೇಗಿಗಳಾದ ಶಾರ್ದೂಲ್ ಠಾಕೂರ್, ಮಹಮದ್ ಶಮಿ, ಉಮೇಶ್ ಯಾದವ್, ಸ್ಪಿನ್ ಸ್ಪೆಷಲಿಸ್ಟ್ ಗಳಾದ ಆರ್ ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್ ತಂಡದಲ್ಲಿ ಮುಂದುವರೆದಿದ್ದಾರೆ.
ಇನ್ನು ಏಷ್ಯಾಕಪ್ ನಲ್ಲಿ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ ಗೈರು ಮುಂದುವರೆಯಲಿದ್ದು, ರಿಷಬ್ ಪಂತ್ ವಿಕೆಟ್ ಕೀಪರ್ ಆಗಿ ಮುಂದುವರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!