ವೀರೇಂದ್ರ ಸೆಹ್ವಾಗ್-ಸುರೇಶ್ ರೈನಾ 
ಕ್ರಿಕೆಟ್

ಪೃಥ್ವಿ ಶಾ ಸ್ಫೋಟಕ ಬ್ಯಾಟಿಂಗ್ ವೀರೇಂದ್ರ ಸೆಹ್ವಾಗರನ್ನು ನೆನಪಿಸಿತು: ಸುರೇಶ್ ರೈನಾ

ಯುವ ಕ್ರಿಕೆಟಿಗ ಪೃಥ್ವಿ ಶಾ ಸ್ಫೋಟಕ ಬ್ಯಾಟಿಂಗ್ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ರನ್ನು ನೆನಪಿಸಿತು ಎಂದು ಕ್ರಿಕೆಟಿಗ ಸುರೇಶ್ ರೈನಾ ಹೇಳಿದ್ದಾರೆ.

ಕೋಲ್ಕತ್ತಾ: ಯುವ ಕ್ರಿಕೆಟಿಗ ಪೃಥ್ವಿ ಶಾ ಸ್ಫೋಟಕ ಬ್ಯಾಟಿಂಗ್ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ರನ್ನು ನೆನಪಿಸಿತು ಎಂದು ಕ್ರಿಕೆಟಿಗ ಸುರೇಶ್ ರೈನಾ ಹೇಳಿದ್ದಾರೆ. 
ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಪೃಥ್ವಿ ಶಾ ಪಾದಾರ್ಪಣೆ ಪಂದ್ಯದಲ್ಲೇ ಭರ್ಜರಿ ಶತಕ ಸಿಡಿಸಿದ್ದು ಹಿರಿಯ ಆಟಗಾರರ ಮೆಚ್ಚುಗೆ ಪಾತ್ರರಾಗಿದ್ದಾರೆ. 
ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರದ ಬ್ಯಾಟಿಂಗ್ ನಡೆಸಿದ ಪೃಥ್ವಿ ಶಾ ಬ್ಯಾಟಿಂಗ್ ಶೈಲಿ ನೋಡಿದಾಗ ನನಗೆ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ರನ್ನು ನೆನಪಿಸಿತು ಎಂದು ಸುರೇಶ್ ರೈನಾ ಹೇಳಿದ್ದಾರೆ. 
ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಂಡ ಪೃಥ್ವಿ ಶಾ 99 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಒಟ್ಟಾರೆ 154 ಎಸೆತಗಳನ್ನು ಎದುರಿಸಿ 134 ರನ್ ಸಿಡಿಸಿ ಔಟಾಗಿದ್ದರು. 
ಇನ್ನು 2010ರಲ್ಲಿ ಕೋಲಂಬೋದಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಸುರೇಶ್ ರೈನಾ ಪಾದಾರ್ಪಣೆ ಪಂದ್ಯದಲ್ಲೇ 120 ರನ್ ಸಿಡಿಸಿ ಸ್ಫೋಟಕ ಬ್ಯಾಟಿಂಗ್ ಗೆ ಹೆಸರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ