ಪೃಥ್ವಿ ಶಾ 
ಕ್ರಿಕೆಟ್

ಯುವ ಕ್ರಿಕೆಟಿಗ ಪೃಥ್ವಿ ಶಾ ಭರ್ಜರಿ ಶತಕ, ಕೊಹ್ಲಿ ಅರ್ಧ ಶತಕ ದಿನದಂತ್ಯಕ್ಕೆ ಭಾರತ 364/4

ಪ್ರವಾಸಿ ವೆಸ್ಟ್ ಇಂಡೀಸ್ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ ಟೀಂ ಇಂಡಿಯಾ 4 ವಿಕೆಟ್ ನಷ್ಟಕ್ಕೆ 364 ರನ್ ಪೇರಿಸಿದೆ...

ರಾಜಕೋಟ್: ಪ್ರವಾಸಿ ವೆಸ್ಟ್ ಇಂಡೀಸ್ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ ಟೀಂ ಇಂಡಿಯಾ 4 ವಿಕೆಟ್ ನಷ್ಟಕ್ಕೆ 364 ರನ್ ಪೇರಿಸಿದೆ. 
ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ಯುವ ಕ್ರಿಕೆಟಿಗ ಪೃಥ್ವಿ ಶಾ 134 ರನ್, ಚೇತೇಶ್ವರ ಪೂಜಾರ 86 ರನ್ ಹಾಗೂ ನಾಯಕ ವಿರಾಟ್ ಕೊಹ್ಲಿ ಅಜೇಯ 72 ರನ್ ಗಳ ನೆರವಿನಿಂದ ಭಾರತ 4 ವಿಕೆಟ್ ನಷ್ಟಕ್ಕೆ 364 ರನ್ ಗಳಿಸಿದೆ. ಇನ್ನು ವಿರಾಟ್ ಕೊಹ್ಲಿ ಹಾಗೂ ರಿಷಬ್ ಪಂತ್ ಎರಡನೇ ದಿನದಾಟವನ್ನು ಆರಂಭಿಸಲಿದ್ದಾರೆ. 
ಯುವ ಕ್ರಿಕೆಟಿಗ ಪೃಥ್ವಿ ಶಾ ಪಾದಾರ್ಪಣೆ ಪಂದ್ಯದಲ್ಲೇ 134 ರನ್ ಗಳನ್ನು ಬಾರಿಸುವ ಮೂಲಕ ದಾಖಲೆ ಬರೆದಿದ್ದಾರೆ. ಇನ್ನು ಚಿಕ್ಕ ವಯಸ್ಸಿನಲ್ಲೇ ಶತಕ ಸಿಡಿಸಿ ಎರಡನೇ ಭಾರತೀಯ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಅತೀ ಚಿಕ್ಕ ವಯಸ್ಸಿಗೆ ಸಚಿನ್ ಶತಕ ಸಿಡಿಸಿ ಮೊದಲ ಆಟಗಾರರಾಗಿದ್ದಾರೆ. 
ವೆಸ್ಟ್ ಪರ ಬೌಲಿಂಗ್ ನಲ್ಲಿ ಗೆಬ್ರಿಯಲ್, ಲೇವಿಸ್, ಬಿಶೂ ಹಾಗೂ ಚೇಸ್ ತಲಾ ಒಂದು ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3ನೇ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ 'INS ಮಂಗ್ರೋಲ್' ಸೇರ್ಪಡೆ-Video

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!

'ಹೃದಯದ ಪ್ರಮುಖ ರಕ್ತನಾಳದಲ್ಲಿ ರಕ್ತದ ಹೆಪ್ಪುಗಟ್ಟುವಿಕೆ'; ಮರಣೋತ್ತರ ಪರೀಕ್ಷೆಯಲ್ಲಿ ನಟ ನಾನಾ ಪಟೇಕರ್ ಸಾವಿನ ಕಾರಣ ಬಹಿರಂಗ!