ಆಸ್ಟ್ರೇಲಿಯಾ ದಿಗ್ಗಜ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ತಲೆಗೆ ಗಾಯ
ಸಿಡ್ನಿ: ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಹೇಡನ್ ತಮ್ಮ ತಲೆಗೆ ಆಗಿರುವ ಗಾಯದ ಫೋಟೋಗಳನ್ನು ತಮ್ಮ ಇನ್'ಸ್ಟಾಗ್ರಾಂ ಖಾತೆಯಲ್ಲಿ ಹಾಕಿದ್ದು, ಈ ಪೋಟೋಗಳು ಇದೀಗ ವೈರಲ್ ಆಗಿವೆ.
ಅಪಘಾತದ ಬಳಿಕ ಹೇಡನ್ ಅವರನ್ನು ಕೂಡಲೇ ಸ್ಕ್ಯಾನಿಂಗ್'ಗೆ ಒಳಪಡಿಸಲಾಗಿದ್ದು, ತಲೆಗೆ ಭಾರೀ ಪ್ರಮಾಣದಲ್ಲಿ ಪೆಟ್ಟು ಬಿದ್ದಿದೆ ಎಂದು ಹೇಳಲಾಗುತ್ತಿದೆ.
ಅಪಘಾತದ ವೇಳೆಯಲ್ಲಿ ನನ್ನನ್ನು ಶೀಘ್ರ ಆಸ್ಪತ್ರೆಗೆ ತಲುಪಿಸಿ ಸ್ಕ್ಯಾನಿಂಗ್'ಗೆ ಸಹಕರಿಸಿದ ಬೆನ್ ಸ್ಯೂ ಕೆಲ್ಲಿಗೆ ಹೇಡನ್ ಅವರು ಧನ್ಯವಾದ ಹೇಳಿದ್ದಾರೆ.
ರಜಾ ದಿನವಾದ್ದರಿಂದ ಕುಟುಂಬದ ಜೊತೆಗೆ ಹೇಡನ್ ಅವರು ಕ್ವೀನ್ಸ್ ಲೆಂಡ್'ಗೆ ತೆರಳಿದ್ದರು. ಸಮುದ್ರದಲ್ಲಿ ಮಗನೊಂದಿಗೆ ಸರ್ಫಿಂಗ್ ಆಟವಾಡುತ್ತಿದ್ದ ವೇಳೆ ಹೇಡನ್ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ.