ಜಸ್ ಪ್ರೀತ್ ಬುಮ್ರಾ-ವಿರಾಟ್ ಕೊಹ್ಲಿ 
ಕ್ರಿಕೆಟ್

ಐಸಿಸಿ ನೂತನ ಏಕದಿನ ರ್ಯಾಂಕಿಂಗ್ ಪಟ್ಟಿ; ವಿರಾಟ್ ಕೊಹ್ಲಿ, ಬುಮ್ರಾ ನಂಬರ್ 1!

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನವಾಗಿ ಏಕದಿನ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಬ್ಯಾಟಿಂಗ್ ನಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್...

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನವಾಗಿ ಏಕದಿನ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಬ್ಯಾಟಿಂಗ್ ನಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಬೌಲಿಂಗ್ ನಲ್ಲಿ ಯುವ ವೇಗಿ ಜಸ್ ಪ್ರೀತ್ ಬುಮ್ರಾ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ. 
ವಿರಾಟ್ ಕೊಹ್ಲಿ 884 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿ ಕಾಯ್ದುಕೊಂಡಿದ್ದಾರೆ. ಇನ್ನು ರೋಹಿತ್ ಶರ್ಮಾ 842 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. 
ಬೌಲಿಂಗ್ ವಿಭಾಗದಲ್ಲಿ ಜಸ್ ಪ್ರೀತ್ ಬುಮ್ರಾ 797 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದು 700 ಅಂಕಗಳೊಂದಿಗೆ ಯುವ ಸ್ಪಿನ್ನರ್ ಕುಲದೀಪ್ ಯಾದವ್ ಮೂರನೇ ಸ್ಥಾನದಲ್ಲಿದ್ದಾರೆ. 
ಇನ್ನು ಐಸಿಸಿ ತಂಡಗಳ ರ್ಯಾಂಕಿಂಗ್ ನಲ್ಲಿ ಭಾರತ 122 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದು ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಏಕದಿನ ಸರಣಿಯಲ್ಲಿ ಸೋಲು ಕಂಡಿತ್ತು. ಈ ಹಿನ್ನೆಲೆಯಲ್ಲಿ ಇಂಗ್ಲೆಂಡ್ 127 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!