ನವದೆಹಲಿ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದ್ದು ಕನ್ನಡಿಗರಾದ ಮನೀಷ್ ಪಾಂಡೆ ಹಾಗೂ ಕೆಎಲ್ ರಾಹುಲ್ ಸ್ಥಾನ ಪಡೆದಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಯ್ಕೆ ಸಮಿತಿ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ. ಇನ್ನು ಏಷ್ಯಾಕಪ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ಕೈಬಿಡಲಾಗಿತ್ತು. ಇದೀಗ ಏಕದಿನ ಸರಣಿಗೆ ಅವರನ್ನು ಆಯ್ಕೆ ಮಾಡಲಾಗಿದೆ.
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ(ಉಪ ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ಅಂಬಟಿ ರಾಯುಡು, ಮನೀಷ್ ಪಾಂಡೆ, ಎಂಎಸ್ ಧೋನಿ(ವಿಕೆಟ್ ಕೀಪರ್), ರಿಷಬ್ ಪಂತ್, ರವೀಂದ್ರ ಜಡೇಜ, ಯಜುವೇಂದ್ರ ಚಹಾಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಖಲೀಲ್ ಅಹಮ್ಮದ್, ಶಾರ್ದೂಲ್ ಠಾಕೂರ್.