ಗುವಾಹಟಿ: ಆತಿಥೇಯ ಟೀಂ ಇಂಡಿಯಾದ ಮೊದಲ ಏಕದಿನ ಪಂದ್ಯದಲ್ಲಿ ವಿಂಡೀಸ್ ತಂಡ ಭರ್ಜರಿ ಬ್ಯಾಟಿಂಗ್ ಮಾಡಿದ್ದು ನಿಗದಿತ ಓವರ್ ನಲ್ಲಿ 322 ರನ್ ಪೇರಿಸಿ ಭಾರತಕ್ಕೆ 323 ರನ್ ಗಳ ಗುರಿ ನೀಡಿದೆ.
ಬರ್ಸಾಪರ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಇದರೊಂದಿಗೆ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 322 ರನ್ ಪೇರಿಸಿತು.
ವೆಸ್ಟ್ ಇಂಡೀಸ್ ಪರ ಹೆಟ್ಮರ್ ಭರ್ಜರಿ ಬ್ಯಾಟಿಂಗ್ ಮಾಡಿ 78 ಎಸೆತಗಳಲ್ಲಿ ಆರು ಭರ್ಜರಿ ಸಿಕ್ಸರ್ ಹಾಗೂ ಆರು ಬೌಂಡರಿ ಸೇರಿ 106 ರನ್ ಬಾರಿಸಿದರು. ಇನ್ನು ಆರಂಭಿಕ ಆಟಗಾರ ಪೊವೆಲ್ ಸಹ 51 ರನ್ ಗಳಿಸಿದ್ದಾರೆ. ಹೋಪ್ 32, ಹೊಲ್ಡೇರ್ 38 ರನ್ ಗಳಿಸಿ ತಂಡ 300ರ ಗಡಿ ದಾಟಲು ನೆರವಾದರು.
ಭಾರತ ಪರ ಬೌಲಿಂಗ್ ನಲ್ಲಿ ಯಜುವೇಂದ್ರ ಚಹಾಲ್ 3, ಮೊಹಮ್ಮದ್ ಶಮಿ ಹಾಗೂ ರವೀಂದ್ರ ಜಡೇಜಾ ತಲಾ 2 ವಿಕೆಟ್, ಅಹ್ಮದ್ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics