ರೋಹಿತ್ ಶರ್ಮಾ - ವಿರಾಟ್ ಕೊಹ್ಲಿ 
ಕ್ರಿಕೆಟ್

ಫಾರ್ಮ್ ನಲ್ಲಿದ್ದಾಗ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿಕೆಟ್ ತೆಗೆಯುವುದು ಕಷ್ಟ: ಜಡೇಜಾ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪ ನಾಯಕ ರೋಹಿತ್ ಶರ್ಮಾ ಇಬ್ಬರೂ ಬ್ಯಾಟಿಂಗ್...

ಗುವಾಹತಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪ ನಾಯಕ ರೋಹಿತ್ ಶರ್ಮಾ ಇಬ್ಬರೂ ಬ್ಯಾಟಿಂಗ್ ಫಾರ್ಮ್ ನಲ್ಲಿದ್ದಾಗ ಅವರ ವಿಕೆಟ್ ತೆಗೆಯುವುದು ತುಂಬಾ ಕಷ್ಟ ಎಂದು ಆಲ್ ರೌಂಡರ್ ಆಟಗಾರ ರವೀಂದ್ರ ಜಡೇಜಾ ಅವರು ಹೇಳಿದ್ದಾರೆ.
ನಿನ್ನೆ ಬರ್ಸಾಪರ ಕ್ರಿಕೆಟ್ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನೀಡಿದ 323 ರನ್ ಗಳ ಗುರಿ ತಲುಪವಲ್ಲಿ ಎರಡನೇ ವಿಕೆಟ್ ನಲ್ಲಿ ಜೊತೆಯಾದ ನಾಯಕ ವಿರಾಟ್ ಕೊಹ್ಲಿ(140 ) ಹಾಗೂ ರೋಹಿತ್ ಶರ್ಮಾ(152) ಜೋಡಿಯ 246 ರನ್ ಗಳ ಭರ್ಜರಿ ಜೊತೆಯಾಟದ ನೆರವಿನೊಂದಿಗೆ ಭಾರತ ಗೆಲುವು ಸಾಧಿಸಿತ್ತು.
ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಸೆಟ್ ಆದರೆ ಇಬ್ಬರೂ ಸಮಾನವಾಗಿ ಆಡುತ್ತಾರೆ ಮತ್ತು ಅಂತಹ ಬ್ಯಾಟ್ಸ್ ಮನ್ ಗಳ ವಿಕೆಟ್ ಪಡೆಯುವುದು ಕಷ್ಟ ಎಂದು ಜಡೇಜಾ ಹೇಳಿದ್ದಾರೆ.
'ಅವರು ಇಬ್ಬರು ಸಮಯೋಚಿತವಾಗಿ ಆಟವಾಡುತ್ತಾರೆ ಮತ್ತು ಯಾವುದೇ ಅವಕಾಶಗಳನ್ನು ತೆಗೆದುಕೊಳ್ಳುವುದಿಲ್ಲ. ಪರಿಸ್ಥಿತಿಗೆ ತಕ್ಕಂತೆ ಬ್ಯಾಟ್ ಬೀಸುತ್ತಾರೆ ಎಂದು ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ತಿಳಿಸಿದ್ದಾರೆ. 
ವಿಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತ ಪರ ಯಜುವೇಂದ್ರ ಚಹಾಲ್ 3 ವಿಕೆಟ್ ಕಿತ್ತರೆ, ಮೊಹಮ್ಮದ್ ಶಮಿ ಹಾಗೂ ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಅತಿಯಾಗಿ ಭಯ ಹುಟ್ಟಿಸಬೇಡಿ, ನಿಮ್ಮ ಹೆದರಿಕೆಗೆ ಬಗ್ಗಲ್ಲ: ಗಾಯದ Video ಶೇರ್​ ಮಾಡಿ ಪೊಲೀಸರಿಗೆ ಆಮೀರ್ ಖಾನ್ ಸೊಸೆ ತಿರುಗೇಟು!

CJP ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್​ಗೆ ಬಿಗ್ ಶಾಕ್; ಗಡಿಪಾರು ಸಾಧ್ಯತೆ

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಹಾರ್ಮೊಜ್ ಮೇಲೆ ಈಗಲೂ ನಮ್ಮದೇ ನಿಯಂತ್ರಣ: ವಾಸ್ತವಕ್ಕೂ ಅಮೆರಿಕ ಹೇಳಿಕೆಗಳಿಗೂ ತಾಳೆಯಾಗುವುದಿಲ್ಲ- ಇರಾನ್