ಸಂಗ್ರಹ ಚಿತ್ರ 
ಕ್ರಿಕೆಟ್

ಕೊಹ್ಲಿ ಆಧುನಿಕ ಕ್ರಿಕೆಟ್ ನ ಶ್ರೇಷ್ಠ ಕ್ರಿಕೆಟಿಗ: ಜಾಂಟಿ ರೋಡ್ಸ್

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಆಧುನಿಕ ಕ್ರಿಕೆಟ್ ನ ಶ್ರೇಷ್ಠ ಕ್ರಿಕೆಟ್ ಆಟಗಾರ ಎಂದು ದಕ್ಷಿಣ ಆಫ್ರಿಕಾ ತಂಡದ ಫೀಲ್ಡಿಂಗ್ ದಂತಕಥೆ ಜಾಂಟಿ ರೋಡ್ಸ್ ಹೇಳಿದ್ದಾರೆ.

ನವದೆಹಲಿ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಆಧುನಿಕ ಕ್ರಿಕೆಟ್ ನ ಶ್ರೇಷ್ಠ ಕ್ರಿಕೆಟ್ ಆಟಗಾರ ಎಂದು ದಕ್ಷಿಣ ಆಫ್ರಿಕಾ ತಂಡದ ಫೀಲ್ಡಿಂಗ್ ದಂತಕಥೆ ಜಾಂಟಿ ರೋಡ್ಸ್ ಹೇಳಿದ್ದಾರೆ.
ಸ್ಪೋರ್ಟ್ಸ್ ಸ್ಟಾರ್ ಲೈವ್ ಎಂಬ ಕ್ರೀಡಾ ವಾಹಿನಿಯೊಂದಿಗೆ ಮಾತನಾಡಿ ಡಾಂಟಿ ರೋಡ್ಸ್, ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಆಟವನ್ನು ತುಂಬು ಹೃದಯದಿಂದ ಶ್ಲಾಘಿಸಿದರು. ಕೊಹ್ಲಿ ಆಟ ನಿಜಕ್ಕೂ ಶ್ಲಾಘನೆಗೆ ಅರ್ಹವಾದದ್ದು. ಕೊಹ್ಲಿ ಆಧುನಿಕ ಕ್ರಿಕೆಟ್ ನ ಸರ್ವ ಶ್ರೇಷ್ಠ ಆಟಗಾರರಾಗಿದ್ದಾರೆ. ಅವರ ಬದ್ಧತೆ, ಆಟದಲ್ಲಿನ ಸ್ಥಿರತೆ, ಪರಿಸ್ಥಿತಿಗೆ ಸಂಬಂಧಿಸಿದಂತೆ ರೂಪಾಂತರವಾಗುವ ಗುಣ ಅದ್ಬುತವಾದದ್ದು. ಇಂತಹ ಗುಣಗಳು ಎಲ್ಲರಿಗೂ ಸಿದ್ಧಿಸುವುದಿಲ್ಲ. ಈ ವಿಚಾರದಲ್ಲಿ ಕೊಹ್ಲಿ ಆಧುನಿಕ ಕ್ರಿಕೆಟ್ ನ ಸರ್ವಶ್ಱೇಷ್ಠ ಆಟಗಾರ ಎಂದು ರೋಡ್ಸ್ ಹೇಳಿದ್ದಾರೆ.
ಕಳೆದ ಭಾನುವಾರ ಗುವಾಹತಿಯಲ್ಲಿ ನಡೆದಿದ್ದ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ್ದ ಕೊಹ್ಲಿ ಮತ್ತೆ ಇಂದು ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಈಗಾಗಲೇ ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲಿ 1 ಶತಕ ಸಿಡಿಸಿರುವ ಕೊಹ್ಲಿ ಸಚಿನ್ ದಾಖಲೆಯನ್ನೂ ಮುರಿಯುವ ವಿಶ್ವಾಸ ಮೂಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT