ಆಸಿಸ್, ವಿಂಡೀಸ್ ವಿರುದ್ಧದ ಟಿ20 ಸರಣಿಯಿಂದ ಧೋನಿ ಔಟ್!
ಮುಂಬರುವ ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ವಿರುದ್ಧ ನಡೆಲಿರುವ ಟಿ20 ಸರಣಿಗಳಿಗೆ ತಂಡ ಪ್ರಕಟ ಮಾಡಲಾಗಿದ್ದು, ತಂಡದಿಂದ ಮಹೇಂದ್ರ ಸಿಂಗ್ ಧೋನಿ ಅವರನ್ನು ಕೈ ಬಿಡಲಾಗಿದೆ.
ನವದೆಹಲಿ: ಮುಂಬರುವ ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ವಿರುದ್ಧ ನಡೆಲಿರುವ ಟಿ20 ಸರಣಿಗಳಿಗೆ ತಂಡ ಪ್ರಕಟ ಮಾಡಲಾಗಿದ್ದು, ತಂಡದಿಂದ ಮಹೇಂದ್ರ ಸಿಂಗ್ ಧೋನಿ ಅವರನ್ನು ಕೈ ಬಿಡಲಾಗಿದೆ.
ಈ ಬಗ್ಗೆ ಆಯ್ಕೆ ಸಮಿತಿ ಮಾಹಿತಿ ನೀಡಿದ್ದು, 2 ಟಿ20 ಸರಣಿಗಳಿಂದ ಧೋನಿಗೆ ವಿಶ್ರಾಂತಿ ನೀಡಲಾಗಿದ್ದು, ಧೋನಿ ಮಾತ್ರವಲ್ಲದೇ ವಿಂಡೀಸ್ ವಿರುದ್ಧದ ಟಿ20 ಸರಣಿಯಿಂದ ನಾಯಕ ಕೊಹ್ಲಿಗೂ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ರೋಹಿತ್ ಶರ್ಮಾಗೆ ಮತ್ತೊಮ್ಮೆ ತಂಡವನ್ನು ಮುನ್ನಡೆಸುವ ಅವಕಾಶ ಒದಗಿ ಬಂದಿದೆ.
ಇದೇ ನವೆಂಬರ್ 4ರಿಂದ ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ 3 ಪಂದ್ಯಗಳ ಟಿ20 ಸರಣಿಯಾಡಲಿದೆ. ಈ ಸರಣಿಯಲ್ಲಿ ಕೊಹ್ಲಿ ಅನುಪಸ್ಥಿತಿ ಮೇರೆಗೆ ರೋಹಿತ್ ಶರ್ಮಾ ತಂಡದ ಮುಂದಾಳತ್ವ ವಹಿಸಲಿದ್ದಾರೆ. ಇನ್ನು ಇದಾದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಆರಂಭವಾಗಲಿರುವ 4 ಪಂದ್ಯಗಳ ಟೆಸ್ಟ್ ಸರಣಿಗೆ ಕೊಹ್ಲಿ ವಾಪಸ್ ಆಗಲಿದ್ದು, ಮುಂಬರುವ ವರ್ಷದ ಆರಂಭದಲ್ಲಿ ಈ ಸರಣಿ ಆರಂಭವಾಗಲಿದೆ. ಇದಾದ ಬಳಿಕ ನಡೆಯಲಿರುವ ಟಿ20 ಸರಣಿಯಲ್ಲಿ ಕೊಹ್ಲಿಯೇ ತಂಡವನ್ನು ಮುನ್ನಡೆಸಲಿದ್ದಾರೆ.
ಇಷ್ಟು ಮಾತ್ರವಲ್ಲದೇ ನ್ಯೂಜಿಲೆಂಡ್ ಎ ತಂಡದ ವಿರುದ್ಧ ನಡೆಯಲಿರುವ ಮೊದಲ ನಾಲ್ಕು ದಿನಗಳ ಪಂದ್ಯಕ್ಕೂ ಆಯ್ಕೆ ಸಮಿತಿ ತಂಡವನ್ನು ಪ್ರಕಟಿಸಿದೆ.
ತಂಡ ಇಂತಿದೆ.
ವಿಂಡೀಸ್ ವಿರುದ್ಧದ ಟಿ20 ಸರಣಿಗೆ
ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ದಿನೇಶ್ ಕಾರ್ತಿಕ್, ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಕ್ರುಣಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಯುಜುವೇಂದ್ರ ಚಹಲ್, ಕುಲ್ ದೀಪ್ ಯಾದವ್, ಭುವನೇಶ್ವರ ಕುಮಾರ್, ಜಸ್ ಪ್ರೀತ್ ಬುಮ್ರಾ, ಖಲೀಲ್ ಅಹ್ಮದ್, ಉಮೇಶ್ ಯಾದವ್ , ಶಾಬಾಜ್ ನದೀಮ್.
ಆಸಿಸ್ ವಿರುದ್ಧದ ಟೆಸ್ಟ್ ಸರಣಿಗೆ
ರೋಹಿತ್ ಶರ್ಮಾ, ರಿಷಬ್ ಪಂತ್, ಪಾರ್ಥಿವ್ ಪಟೇಲ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ ದೀಪ್ ಯಾದವ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಉಮೇಶ್ ಯಾದವ್, ವಿರಾಟ್ ಕೊಹ್ಲಿ (ನಾಯಕ), ಮುರಳಿ ವಿಜಯ್, ಕೆಎಲ್ ರಾಹುಲ್, ಪೃಥ್ವಿ ಶಾ, ಚೇತೇಶ್ವರ ಪೂಜಾರಾ, ಅಜಿಂಕ್ಯಾ ರಹಾನೆ, ಹನುಮವಿಹಾರಿ, ಜಸ್ ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್.
ಆಸಿಸ್ ವಿರುದ್ಧದ ಟಿ20 ಸರಣಿಗೆ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಶಿಖರ್ ಧವನ್, ಕೆ.ಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ದಿನೇಶ್ ಕಾರ್ತಿಕ್, ರಿಷಬ್ ಪಂತ್ (ವಿಕೆಟ್ ಕೀಪರ್), ಕುಲ್ ದೀಪ್ ಯಾದವ್, ಯಜುವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಕ್ರುಣಾಲ್ ಪಾಂಡ್ಯ, ಭುವನೇಶ್ವರ ಕುಮಾರ್, ಜಸ್ ಪ್ರೀತ್ ಬುಮ್ರಾ, ಉಮೇಶ್ ಯಾದವ್, ಖಲೀಲ್ ಅಹ್ಮದ್.
ನ್ಯೂಜಿಲೆಂಡ್ ಎ ವಿರುದ್ಧದ 4 ದಿನಗಳ ಪಂದ್ಯಕ್ಕೆ
ಅಜಿಂಕ್ಯ ರಹಾನೆ (ನಾಯಕ), ಮುರಳಿ ವಿಜಯ್, ಪೃಥ್ವಿ ಶಾ, ಮಾಯಾಂಕ್ ಅಗರ್ವಾಲ್, ಹನುಮವಿಹಾರಿ, ರೋಹಿತ್ ಶರ್ಮಾ, ಪಾರ್ಥಿವ್ ಪಟೇಲ್ (ವಿಕೆಟ್ ಕೀಪರ್), ಕೆ ಗೌತಮ್, ಶಹಬಾಜ್ ನದೀಮ್, ಎಂ.ಡಿ. ಸಿರಾಜ್, ನವದೀಪ್ ಸೈನಿ, ದೀಪಕ್ ಚಹಾರ್, ಆರ್ ಗುರ್ಬಾನಿ, ವಿಜಯ್ ಶಂಕರ್