ಕೊಹ್ಲಿ ಹ್ಯಾಟ್ರಿಕ್ ಶತಕ ವ್ಯರ್ಥ: 3 ನೇ ಏಕದಿನ ಪಂದ್ಯದಲ್ಲಿ ಭಾರತವನ್ನು ಮಣಿಸಿದ ವೆಸ್ಟ್ ಇಂಡೀಸ್
ಪುಣೆಯಲ್ಲಿ ನಡೆದ ಭಾರತ-ವೆಸ್ಟ್ ಇಂಡೀಸ್ ವಿರುದ್ಧದ 3 ನೇ ಏಕದಿನ ಪಂದ್ಯದಲ್ಲಿ ಆತಿಥೇಯ ತಂಡ ಭಾರತವನ್ನು 43 ರನ್ ಗಳ ಅಂತರದಿಂದ ಮಣಿಸಿದೆ.
ಪುಣೆ: ಪುಣೆಯಲ್ಲಿ ನಡೆದ ಭಾರತ-ವೆಸ್ಟ್ ಇಂಡೀಸ್ ವಿರುದ್ಧದ 3 ನೇ ಏಕದಿನ ಪಂದ್ಯದಲ್ಲಿ ಆತಿಥೇಯ ತಂಡ ಭಾರತವನ್ನು 43 ರನ್ ಗಳ ಅಂತರದಿಂದ ಮಣಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ವೆಸ್ಟ್ ಇಂಡೀಸ್ ತಂಡ ಭಾರತಕ್ಕೆ ಗೆಲ್ಲಲು 284 ರನ್ ಗಳ ಗುರಿ ನೀಡಿತ್ತು. ಟಾರ್ಗೆಟ್ ಬೆನ್ನಟ್ಟಿದ ಭಾರತದ ಪರ ಕ್ಯಾಪ್ಟನ್ ಕೊಹ್ಲಿ 119 ಎಸೆತಗಳಲ್ಲಿ 107 ರನ್ ಗಳಿಸಿದರಾದರೂ ಅವರ ಶತಕ ವ್ಯರ್ಥವಾಯಿತು. ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳ ವೈಫಲ್ಯದಿಂದ ಭಾರತ 47.4 ಓವರ್ ಗಳಿಗೆ 240 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ವೆಸ್ಟ್ ಇಂಡೀಸ್ ಪರ 45 ರನ್ ಗಳ ಸೋಲು ಕಾಣಬೇಕಾಯಿತು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.