4ನೇ ಏಕದಿನ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ಅದ್ಭುತ ಪ್ರಾರಂಭ ನಡುವೆಯೇ ಶಿಖರ್ ಔಟ್
ಭಾರತ-ವೆಸ್ಟ್ ಇಂಡೀಸ್ ವಿರುದ್ಧ ನಾಲ್ಕನೇ ಏಕದಿನ ಪಂದ್ಯ ಮುಂಬೈನಲ್ಲಿ ಪ್ರಾರಂಭವಾಗಿದೆ. ಟಾಸ್ ಗೆದ್ದ ಕೊಹ್ಲಿ ಪಡೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಮುಂಬೈ: ಭಾರತ-ವೆಸ್ಟ್ ಇಂಡೀಸ್ ವಿರುದ್ಧ ನಾಲ್ಕನೇ ಏಕದಿನ ಪಂದ್ಯ ಮುಂಬೈನಲ್ಲಿ ಪ್ರಾರಂಭವಾಗಿದೆ. ಟಾಸ್ ಗೆದ್ದ ಕೊಹ್ಲಿ ಪಡೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಕಳೆದ ಮೂರು ಪ<ದ್ಯದಲ್ಲಿ 1-1 ಸಮಬಲ ಸಾಧಿಸಿರುವ ಎರಡೂ ತಂಡಗಳಿಗೆ ಇದು ಪ್ರತಿಷ್ಠಿತ ಪಂದ್ಯವಾಗಿದೆ.
ಟೀಂ ಇಂಡಿಯಾದಲ್ಲಿ ಚಾಹಲ್ ಹಾಗೂ ಪಂತ್ ಬದಲಿಗೆ ಜಡೇಜಾ ಹಾಗೂ ಕೇದಾರ್ ಜಾಧವ್ ಸೇರ್ಪಡೆಯಾಗಿದ್ದಾರೆ.
ಪ್ರಾರಂಭಿಕ ಆಟಗಾರರಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ 50 ರನ್ ಜತೆಯಾಟವಾಡಿದ್ದರು. ಶಿಖರ್ ಧವನ್ 40 ಬಾಲ್ ಗಳಲ್ಲಿ 38 ರನ್ ಗಳಿಸಿ ಕೀಮೋ ಪೌಲ್ ಗೆ ವಿಕೆಟ್ ಒಪ್ಪಿಸಿದ್ದಾರೆ.
ಇತ್ತೀಚಿನ ವರದಿಯಂತೆ ಭಾರತ 15 ಓವರ್ ಗಳಲ್ಲಿ 93/1 ರನ್ ಗಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.