ಟೀಂ ಇಂಡಿಯಾ 
ಕ್ರಿಕೆಟ್

ರೋ'ಹಿಟ್', ಅಂಬಟ್ಟಿ ಆರ್ಭಟ, ವಿಂಡೀಸ್‌ ವಿರುದ್ಧ ಭಾರತಕ್ಕೆ 224 ರನ್‌ಗಳ ಭರ್ಜರಿ ಜಯ!

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 224 ರನ್ ಗಳಿಂದ ಭರ್ಜರಿ ಜಯ ಗಳಿಸಿದ್ದು ಭಾರತ 2-1 ಅಂತರದಿಂದ ಮುನ್ನಡೆ ಸಾಧಿಸಿದೆ.

ಮುಂಬೈ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 224 ರನ್ ಗಳಿಂದ ಭರ್ಜರಿ ಜಯ ಗಳಿಸಿದ್ದು ಭಾರತ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. 
ಮುಂಬೈನಲ್ಲಿ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾದ ಪರ ಆರಂಭಿಕ ಆಟಗಾರ ರೋಹಿತ್ ಶರ್ಮಾ 162 ರನ್ ಹಾಗೂ ಅಂಬಟ್ಟಿ ರಾಯುಡು 100 ರನ್ ಗಳ ನೆರವಿನಿಂದ ತಂಡ 377 ರನ್ ಪೇರಿಸಲು ಸಾಧ್ಯವಾಯಿತು. 378 ರನ್ ಗಳ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡಕ್ಕೆ ಆರಂಭಿಕ ಕುಸಿತ ಕಂಡಿದ್ದು ಸ್ಟಾರ್ ಬ್ಯಾಟ್ಸ್ ಮನ್ ಗಳು ರನ್ ಗಳಿಸದೆ ಔಟಾಗಿದ್ದರಿಂದ ತಂಡ 153 ರನ್ ಗಳಿಗೆ ಆಲೌಟ್ ಆಗಿದ್ದು 224 ರನ್ ಗಳಿಂದ ಸೋಲು ಕಂಡಿದೆ. 
ವೆಸ್ಟ್ ಇಂಡೀಸ್ ಪರ ಬ್ಯಾಟಿಂಗ್ ನಲ್ಲಿ ಹೆಮ್ರಾಜ್ 14, ಸಾಮೂಯೆಲ್ಸ್ 18, ಹೆಟ್ಮರ್ 13, ಪೌಲ್ 19 ಹಾಗೂ ಹೊಲ್ಡರ್ ಅಜೇಯ 54 ರನ್ ಗಳಿಸಿದ್ದಾರೆ. 
ಭಾರತ ಪರ ಬೌಲಿಂಗ್ ನಲ್ಲಿ ಕಲೀಲ್ ಅಹಮ್ಮದ್, ಕುಲದೀಪ್ ಯಾದವ್ ತಲಾ 3, ಭುವನೇಶ್ವರ್ ಕುಮಾರ್ ಹಾಗೂ ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದಿದ್ದಾರೆ. 
ಭಾರತ ಪರ ಶಿಖರ್ ಧವನ್ 38, ವಿರಾಟ್ ಕೊಹ್ಲಿ 16, ಎಂಎಸ್ ಧೋನಿ 23 ಹಾಗೂ ಕೇದಾರ್ ಜಾದವ್ ಅಜೇಯ 16 ರನ್ ಬಾರಿಸಿದ್ದಾರೆ. 
ವಿಂಡೀಸ್ ಪರ ಬೌಲಿಂಗ್ ನಲ್ಲಿ ರೋಚ್ 2, ನರ್ಸ್ ಹಾಗೂ ಪೌಲ್ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel