ಏಷ್ಯಾ ಕಪ್ ಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದ್ದು ನಿರೀಕ್ಷೆಯಂತೆಯೇ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಏಷ್ಯ ಕಪ್ ಟೂರ್ನಿ ನಡೆಯಲಿದ್ದು, ರಾಜಸ್ಥಾನದ ಎಡಗೈ ವೇಗಿ ಖಲೀಲ್ ಅಹ್ಮದ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಸೆ.15 ರಿಂದ ಪ್ರಾರಂಭವಾಗಲಿರುವ ಏಷ್ಯ ಕಪ್ ಟೂರ್ನಿಯಲ್ಲಿ ಭಾರತ ಮೊದಲು ಬಾಂಗ್ಲಾ ವಿರುದ್ಧ ಸೆಣೆಸಲಿದೆ.
ಭಾರತ ತಂಡದ ವಿವರ ಹೀಗಿದೆ: ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್ (ಉಪನಾಯಕ) ಕೆ. ಎಲ್ ರಾಹುಲ್, ಅಂಬಟಿ ರಾಯುಡು, ಮನೀಷ್ ಪಾಂಡೆ, ಕೇದಾರ್ ಜಾಧವ್, ಮಹೇಂದ್ರ ಸಿಂಗ್ ಧೋನಿ( ವಿಕೆಟ್ ಕೀಪರ್) ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರಿಪ್ ಬೂಮ್ರಾ, ಶಾರ್ದೂಲ್ ಠಾಕೂರ್, ಖಲೀಲ್ ಅಹ್ಮದ್