ವಿರಾಟ್ ಕೊಹ್ಲಿ 
ಕ್ರಿಕೆಟ್

ಇಂಗ್ಲೆಂಡ್ ವಿರುದ್ಧ ಸರಣಿ ಸೋಲಿನ ಮುಖಭಂಗದ ನಡುವೆ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ ಕೊಹ್ಲಿ!

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಮುಖಭಂಗದ ನಡುವೆಯೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ...

ದುಬೈ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಮುಖಭಂಗದ ನಡುವೆಯೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನವಾಗಿ ಬಿಡುಗಡೆ ಮಾಡಿರುವ ರ್ಯಾಂಕಿಂಗ್ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 937 ಅಂಕಗಳನ್ನು ಸಂಪಾದಿಸುವ ಮೂಲಕ ಮತ್ತೆ ಅಗ್ರಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಇನ್ನು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೊದಲ ಇನ್ನಿಂಗ್ಸ್ ನಲ್ಲಿ 46 ಮತ್ತು ಎರಡನೇ ಇನ್ನಿಂಗ್ಸ್ ನಲ್ಲಿ 58 ರನ್ ಬಾರಿಸಿದ್ದು, ಒಟ್ಟಾರೆ 8 ಇನ್ನಿಂಗ್ಸ್ ಗಳ ಪೈಕಿ 544 ರನ್ ಗಳನ್ನು ಪೇರಿಸಿದ್ದಾರೆ. 
ಕ್ರಿಕೆಟ್ ದಿಗ್ಗಜ ಡಾನ್ ಬ್ರಾಡ್ಮನ್ 961 ಅಂಕ ಗಳಿಸಿರುವುದು ಸಾರ್ವಕಾಲಿಕ ದಾಖಲೆಯಾಗಿದೆ. ಈ ಪೈಕಿ ವಿರಾಟ್ ಕೊಗ್ಲಿ 937 ಅಂಕಗಳನ್ನು ಸಂಪಾದಿಸುವ ಮೂಲಕ ಸಾರ್ವಕಾಲಿಕ ದಾಖಲೆ ಪಟ್ಟಿಯಲ್ಲಿ 11ನೇ ಸ್ಥಾನ ಸಂಪಾದಿಸಿದ್ದಾರೆ. 
ಸಾರ್ವಕಾಲಿಕ ದಾಖಲೆ ಪಟ್ಟಿಯಲ್ಲಿ ಸ್ಟೀವನ್ ಸ್ಮಿತ್(947), ಲೇನ್ ಹಂಟನ್(945), ಜಾಕ್ ಹಬ್ಸ್(942), ರಿಕ್ಕಿ ಪಾಂಟಿಂಗ್(942), ಪೀಟರ್ ಮೇ(941), ಗ್ಯಾರಿ ಸೊಬರ್ಸ್, ಕ್ಲೈಡ್ ವಾಲ್ಕೂಟ್, ವಿವಿನ್ ರಿಚರ್ಡ್ಸ್ ಮತ್ತು ಕುಮಾರ ಸಂಗಕ್ಕಾರ(ಎಲ್ಲರೂ 938 ಅಂಕ) ಗಳಿಸಿ ಕ್ರಮವಾಗಿ ಸ್ಥಾನ ಪಡೆದಿದ್ದಾರೆ.
ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ನಲ್ಲಿ ಮೊಹಮ್ಮದ್ ಶಮಿ ಮೂರು ಸ್ಥಾನಗಳಲ್ಲಿ ಏರಿಕೆ ಕಂಡಿದ್ದು ಟಾಸ್ 20ರಲ್ಲಿ ಸ್ಥಾನಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್