ಬಿಜಾಪುರ್ ಬುಲ್ಸ್-ಬೆಂಗಳೂರು ಬ್ಲಾಸ್ಟರ್ಸ್
ಮೈಸೂರು: ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್) 7ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು 7 ವಿಕೆಟ್ ಗಳಿಂದ ಮಣಿಸಿ ಎರಡನೇ ಬಾರಿಗೆ ಬಿಜಾಪುರ ಬುಲ್ಸ್ ಕೆಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಫೈನಲ್ ಪಂದ್ಯದಲ್ಲಿ ರಾಬಿನ್ ಉತ್ತಪ್ಪ ನಾಯಕ್ವದ ಬೆಂಗಳೂರು ಬ್ಲಾಸ್ಟರ್ಸ್ ತಂಡ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡಲಿಲ್ಲ. ಬಿಜಾಪುರ ತಂಡದ ದಾಳಿಗೆ ತತ್ತರಿಸಿದ ಬೆಂಗಳೂರು ಬ್ಲಾಸ್ಟರ್ಸ್ ನಿಗದಿತ ಓವರ್ ಗಳಲ್ಲಿ 10 ವಿಕೆಟ್ ಕಳೆದುಕೊಂಡು 101 ರನ್ ಗಳಿಗೆ ಆಲೌಟ್ ಆಯಿತು.
ಬ್ಲಾಸ್ಟರ್ಸ್ ನೀಡಿದ 102 ರನ್ ಗಳ ಸುಲಭ ಗುರಿ ಬೆನ್ನಟ್ಟಿದ ಬಿಜಾಪುರ ಬುಲ್ಸ್ 13.5 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ಮುನ್ನಟ್ಟಿ ಗೆಲುವಿನ ನಗೆ ಬೀರಿತು.
ಬಿಜಾಪುರ ಬುಲ್ಸ್ ತಂಡ 2015ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಇದೀಗ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇನ್ನು ಚಾಂಪಿಯನ್ ಬಿಜಾಪುರ ತಂಡ 20 ಲಕ್ಷ ರುಪಾಯಿ ಬಹುಮಾನ ಪಡೆಯಿತು.