ಕೆಎಲ್ ರಾಹುಲ್ 
ಕ್ರಿಕೆಟ್

ಕನ್ನಡಿಗ ಕೆಎಲ್ ರಾಹುಲ್‌ಗೆ ಕೊನೆಯ ಚಾನ್ಸ್ ಸಾಧ್ಯತೆ! ವಿಶ್ವಕಪ್‌ನಲ್ಲಿ ಸ್ಥಾನ ಕಳೆದುಕೊಳ್ತಾರಾ ರಾಹುಲ್?

ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಏಕದಿನ ಸರಣಿ ಸೋಲಿನ ಬಳಿಕ ಇದೀಗ ಟೆಸ್ಟ್ ಸರಣಿಯನ್ನು ಸೋತು ಮುಖಭಂಗ ಅನುಭವಿಸಿದ್ದು ಸರಣಿಯಲ್ಲಿ ಕೆಟ್ಟ...

ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಏಕದಿನ ಸರಣಿ ಸೋಲಿನ ಬಳಿಕ ಇದೀಗ ಟೆಸ್ಟ್ ಸರಣಿಯನ್ನು ಸೋತು ಮುಖಭಂಗ ಅನುಭವಿಸಿದ್ದು ಸರಣಿಯಲ್ಲಿ ಕೆಟ್ಟ ಪ್ರದರ್ಶನ ನೀಡುತ್ತಿರುವ ಕೆಎಲ್ ರಾಹುಲ್ ಗೆ ಕೊನೆಯ ಚಾನ್ಸ್ ನೀಡುವ ಸಾಧ್ಯತೆ ಇದೆ. 
ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 3-1 ಅಂತರದಿಂದ ಸರಣಿಯನ್ನು ಸೋತಿರುವ ಭಾರತ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಆಡಲಿದೆ. ವಿರಾಟ್ ಕೊಹ್ಲಿ ಪಡೆ ಈ ಪಂದ್ಯವನ್ನು ಪ್ರತಿಷ್ಠೆಗಷ್ಟೇ ಆಡಲಿದೆ. 
ಬ್ಯಾಟ್ಸ್ ಮನ್ ಗಳ ಕಳಪೆ ಪ್ರದರ್ಶನದಿಂದಾಗಿ ಟೀಂ ಇಂಡಿಯಾ ವೈಫಲ್ಯ ಅನುಭವಿಸುವಂತಾಯಿತು. ಇದರೊಂದಿಗೆ ಇಂಗ್ಲೆಂಡ್ ನೆಲದಲ್ಲಿ ಸರಣಿ ಗೆಲ್ಲುವ ಸುವರ್ಣಾವಕಾಶವನ್ನು ಭಾರತ ಕೈಚೆಲ್ಲಿತ್ತು. 
ಇನ್ನು ಟೀಂ ಇಂಡಿಯಾದ ಓಪರ್ ಗಳಾದ ಕೆಎಲ್ ರಾಹುಲ್ ಹಾಗೂ ಶಿಖರ್ ಧವನ್ ತೀರಾ ಕೆಟ್ಟ ಪ್ರದರ್ಶನವನ್ನು ನೀಡಿದ್ದಾರೆ. ಇವರಿಬ್ಬರ ಮಧ್ಯೆ ಓರ್ವ ಆಟಗಾರ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತವೆನಿಸಿದೆ. ಹಾಗಾಗಿ ಯುವ ಆಟಗಾರ ಪೃಥ್ವಿ ಶಾ ಈ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಲಿದ್ದಾರೆ. 
ಸತತ ವೈಫಲ್ಯದ ಹೊರತಾಗಿಯೂ ರಾಹುಲ್ ಕೊನೆಯ ಅವಕಾಶ ಪಡೆಯುವ ಸಾಧ್ಯತೆಯಿದೆ. ಇದಕ್ಕಾಗಿಯೇ ನೆಟ್ಸ್ ನಲ್ಲಿ ರಾಹುಲ್ ಬೆವರಿಳಿಸಿದ್ದಾರೆ.
ರಾಹುಲ್ ಸತತ ವೈಫಲ್ಯ ಕಾಣುತ್ತಿದ್ದು ಮುಂಬರುವ ವಿಶ್ವಕಪ್ ಪಂದ್ಯಾವಳಿಯಲ್ಲಿ ಆಡುವ ಅವಕಾಶವನ್ನು ಕಳೆದುಕೊಳ್ಳುವ ಸಾಧ್ಯತೆ ಇದ್ದು ಕೊನೆಯ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶ ಸಿಕ್ಕರೆ ಅದರಲ್ಲಿ ಉತ್ತಮ ಪ್ರದರ್ಶನ ನೀಡಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್