ಇಂಗ್ಲೆಂಡ್ ನೆಲದಲ್ಲಿ ಕೊಹ್ಲಿ ಅಪರೂಪದ ಕಳಪೆ ಸಾಧನೆ! ಟೀಂ ಇಂಡಿಯಾದಲ್ಲಿ ಈ ಕಳಪೆ ಸಾಧನೆ ಮಾಡಿದ್ದ ಮತ್ತೊಬ್ಬ ನಾಯಕನಿಲ್ಲ!
ಇಂಗ್ಲೆಂಡ್ ನೆಲದಲ್ಲಿ ದಾಖಲೆಗಳ ಮೇಲೆ ದಾಖಲೆಗಳನ್ನು ಸೃಷ್ಟಿಸುತ್ತಿರುವ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಇದೀಗ ಅಪರೂಪದ ಕಳಪೆ ಸಾಧನೆಯೊಂದನ್ನು ಮಾಡಿದ್ದಾರೆ...
ಓವೆಲ್: ಇಂಗ್ಲೆಂಡ್ ನೆಲದಲ್ಲಿ ದಾಖಲೆಗಳ ಮೇಲೆ ದಾಖಲೆಗಳನ್ನು ಸೃಷ್ಟಿಸುತ್ತಿರುವ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಇದೀಗ ಅಪರೂಪದ ಕಳಪೆ ಸಾಧನೆಯೊಂದನ್ನು ಮಾಡಿದ್ದಾರೆ.
ಓವೆಲ್ ನಲ್ಲಿ ನಡೆಯುತ್ತಿರುವ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ನಾಯಕ ಜೋ ರೂಟ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ವಿರಾಟ್ ಕೊಹ್ಲಿ ಎಲ್ಲಾ ಪಂದ್ಯಗಳಲ್ಲೂ ಟಾಸ್ ಸೋಲುವ ಮೂಲಕ ಕಳಪೆ ಸಾಧನೆಯೊಂದನ್ನು ಮಾಡಿದ್ದಾರೆ.
ಇನ್ನು 1998-99ರಲ್ಲಿ ಆಸ್ಟ್ರೇಲಿಯಾ ಮಾರ್ಕ್ ಟೇಲರ್ ಈ ಕಳಪೆ ಸಾಧನೆಯನ್ನು ಮಾಡಿ ಇತಿಹಾಸ ನಿರ್ಮಿಸಿದ್ದರು. ಇದೀಗ ವಿರಾಟ್ ಕೊಹ್ಲಿ ಸಹ ಐದು ಪಂದ್ಯಗಳಲ್ಲೂ ಟಾಸ್ ಸೋಲುವ ಮೂಲಕ ಹೊಸ ಸಾಧನೆ ಮಾಡಿದ್ದಾರೆ.