ವಿರಾಟ್ ಕೊಹ್ಲಿ, ಸುನೀಲ್ ಗವಾಸ್ಕರ್ 
ಕ್ರಿಕೆಟ್

ಸೋಲಿನ ಮುಖಭಂಗ; ಪ್ರತಿ ಸಲ ಕೊಹ್ಲಿಯ ಅನುಭವದ ಕೊರತೆ ಎದ್ದು ಕಾಣುತ್ತಿದೆ: ಕ್ರಿಕೆಟ್ ದಿಗ್ಗಜ ಗವಾಸ್ಕರ್ ತರಾಟೆ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 4 ಪಂದ್ಯಗಳಲ್ಲಿ ಸೋತು ಮುಖಭಂಗ ಅನುಭವಿಸಿದ್ದ ಟೀಂ ಇಂಡಿಯಾ ವಿರುದ್ಧ ಎಲ್ಲಡೆಯಿಂದ ಟೀಕೆಗಳ ಸುರಿಮಳೆಯಾಗುತ್ತಿದ್ದು...

ನವದೆಹಲಿ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 4 ಪಂದ್ಯಗಳಲ್ಲಿ ಸೋತು ಮುಖಭಂಗ ಅನುಭವಿಸಿದ್ದ ಟೀಂ ಇಂಡಿಯಾ ವಿರುದ್ಧ ಎಲ್ಲಡೆಯಿಂದ ಟೀಕೆಗಳ ಸುರಿಮಳೆಯಾಗುತ್ತಿದ್ದು ಇನ್ನು ಕ್ರಿಕೆಟ್ ದಿಗ್ಗಜ ಸುನೀಲ್ ಗವಾಸ್ಕರ್ ಅವರು ವಿರಾಟ್ ಕೊಹ್ಲಿಯನ್ನು ಕಟುವಾಗಿ ಟೀಕಿಸಿದ್ದಾರೆ. 
ಟೀಂ ಇಂಡಿಯಾದ ಮಾಜಿ ನಾಯಕ ಸುನೀಲ್ ಗವಾಸ್ಕರ್ ಅವರು ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೊಹ್ಲಿ ಈಗಲೂ ಕಲಿಯುವುದು ಸಾಕಷ್ಟಿದೆ ಎಂದು ಚಾಟಿ ಬೀಸಿದ್ದಾರೆ. 
ಇಂಗ್ಲೆಂಡ್ ವಿರುದ್ಧದ ಸೋಲು ನನಗೆ ಅಚ್ಚರಿಯೇನೂ ತಂದಿಲ್ಲ. ತಂಡವಿನ್ನೂ ರೆಡ್ ಬಾಲ್ ಕ್ರಿಕೆಟ್ ಗೆ ಸರಿಯಾಗಿ ಹೊಂದಿಕೊಂಡಿಲ್ಲ. ಇದು ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್ ಸರಣಿಯಲ್ಲಿ ಏನಾಯ್ತು ಎಂಬುದನ್ನು ನಾವು ನೋಡಿದ್ದೇವೆ. ಹಳೆಯ ಮಾತಿನಂತೆ, ತಯಾರಿಯಲ್ಲಿ ಸೋಲು ಕಂಡರೆ, ಸೋಲಲು ತಯಾರಿರಬೇಕಾಗುತ್ತದೆ ಎಂದು ಟೀಕಿಸಿದ್ದಾರೆ. 
ನಾಯಕನಾಗಿ ವಿರಾಟ್ ಕೊಹ್ಲಿ ಕಲಿಯಬೇಕಾದದ್ದು ಬಹಳಷ್ಟಿದೆ. ಬೌಲಿಂಗ್ ಮತ್ತು ಫೀಲ್ಡಿಂಗ್ ನಲ್ಲಿ ಮಾಡಿದ ಬದಲಾವಣೆಯೇ ಈ ಭಿನ್ನತೆಗೆ ಕಾರಣವಾಗಿದೆ. ನಾಯಕನಾಗಿ ಎರಡು ವರ್ಷಗಳಷ್ಟೇ ಕಳೆದಿದ್ದು ಕೊಹ್ಲಿಗೆ ಅನುಭವದ ಕೊರತೆಯಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಕೈ ಮುಗೀತೀನಿ ಬಿಟ್ ಬಿಡ್ರೋ': ಫ್ರೀ ಗಿಫ್ಟ್ ಕೇಳಿದ್ದೇ ತಪ್ಪಾಯ್ತು, ಮನೆಗೆ ಬಂತು 70 ಕೋಟಿ ರೂ.ಮಿಲಿಟರಿ ಟ್ಯಾಂಕ್ ಆರ್ಡರ್; ನೆಟ್ಟಿಗರ ಕಾಟಕ್ಕೆ ವ್ಯಕ್ತಿ ಹೈರಾಣ!-Video

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?