ನವದೆಹಲಿ: ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಆಟಗಾರರು ಕಳಪೆ ಪ್ರದರ್ಶನ ನೀಡಿದ್ದರ ವಿರುದ್ಧ ಆಕ್ರೋಶಗೊಂಡಿರುವ ಆಯ್ಕೆ ಸಮಿತಿ ಇನ್ಮುಂದೆ ಉತ್ತಮ ಪ್ರದರ್ಶನ ನೀಡಿದ್ದರಂತೆ ಅಂತಹ ಆಟಗಾರರನ್ನು ಮುಲಾಜಿಲ್ಲದೆ ಕಿತ್ತೆಸೆಯಲಾಗುವುದು ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್‌ಕೆ ಪ್ರಸಾದ್ ಹೇಳಿದ್ದಾರೆ.
ಟೆಸ್ಟ್ ಕ್ರಿಕೆಟ್ ನಲ್ಲಿ ನಂಬರ್ ತಂಡವಾಗಿದ್ದರು ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 1-4 ಅಂತರದಿಂದ ಹೀನಾಯ ಸೋಲು ಕಂಡು ಸರಣಿಯನ್ನು ಕೈಚೆಲ್ಲಿತ್ತು. ಪಂದ್ಯಗಳಲ್ಲಿ ಆಟಗಾರರ ಕಳಪೆ ಪ್ರದರ್ಶನದ ವಿರುದ್ಧ ಆಕ್ರೋಶಗೊಂಡಿರುವ ಆಯ್ಕೆ ಸಮಿತಿ ಆಟಗಾರರಿಗೆ ಕಟ್ಟೆಚ್ಚರದ ನಿರ್ದೇಶನವನ್ನು ನೀಡಿದೆ.
ಇನ್ಮುಂದೆ ಉತ್ತಮ ಪ್ರದರ್ಶನ ನೀಡದ ಆಟಗಾರರಿಗೆ ಮತ್ತೊಂದು ಅವಕಾಶ ನೀಡುವುದಿಲ್ಲ. ಅದರ ಬದಲಿಗೆ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕಾಗುತ್ತದೆ ಎಂದು ಎಂಎಸ್‌ಕೆ ಪ್ರಸಾದ್ ಹೇಳಿದ್ದಾರೆ.
ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಬೌಲರ್ ಗಳು ಉತ್ತಮ ಪ್ರದರ್ಶನ ನೀಡಿದ್ದಾರೆ. ಐದು ಟೆಸ್ಟ್ ಪಂದ್ಯಗಳಲ್ಲಿ 60ಕ್ಕೂ ಹೆಚ್ಚು ವಿಕೆಟ್ ಗಳನ್ನು ಪಡೆದಿದ್ದಾರೆ. ಇದೇ ವೇಳೆ ಅತ್ಯುತ್ತಮ ಕ್ಯಾಚ್ ಗಳನ್ನು ಹಿಡಿಯಲಾಗಿದೆ. ಆದರೆ ಬ್ಯಾಟಿಂಗ್ ನಲ್ಲಿ ಮಾತ್ರ ಹೇಳಿಕೊಳ್ಳುವಂತಾ ಪ್ರದರ್ಶನ ಕಂಡುಬರಲಿಲ್ಲ ಎಂದು ಹೇಳಿದ್ದಾರೆ.