ವಿರಾಟ್ ಕೊಹ್ಲಿ 
ಕ್ರಿಕೆಟ್

ವಿರಾಟ್ ಕೊಹ್ಲಿ ಇರದಿದ್ದರೇನು, ರೋಹಿತ್ ಶರ್ಮಾ ಇದ್ದಾನಲ್ಲ ಎಂದು ಗಂಗೂಲಿ ಹೇಳಿದ್ದೇಕೆ!

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಪ್ರಾರಂಭವಾಗಿದ್ದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸುತ್ತಿದ್ದಾರೆ...

ದುಬೈ: 2018ರ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಪ್ರಾರಂಭವಾಗಿದ್ದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸುತ್ತಿದ್ದಾರೆ. 
ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲೂ ಟೀಂ ಇಂಡಿಯಾನೇ 2018ರ ಏಷ್ಯಾಕಪ್ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ ಎಂದು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ. 
ಇಂಗ್ಲೆಂಡ್ ಪ್ರವಾಸದ ಬಳಿಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸುತ್ತಿದ್ದಾರೆ. 
ಇನ್ನು ತಂಡದಲ್ಲಿ ವಿರಾಟ್ ಕೊಹ್ಲಿ ಇದ್ದಿದ್ದರೆ ಮತ್ತಷ್ಟು ಪ್ರಬಲವಾಗಿರುತ್ತಿತ್ತು. ಆದರೇನಂತೆ ಹಿಟ್ ಮ್ಯಾನ್ ರೋಹಿತ್ ಶರ್ಮಾ ಸಹ ಅತ್ಯುತ್ತಮ ನಾಯಕತ್ವ ದಾಖಲೆಯನ್ನು ಹೊಂದಿದ್ದಾರೆ. ಅವರೂ ಕೂಡ ಉತ್ತಮ ನಿರ್ವಹಣೆ ನೀಡುವ ನಿರೀಕ್ಷೆ ನನಗಿದೆ ಎಂದು ಗಂಗೂಲಿ ಹೇಳಿದ್ದಾರೆ. 
ಕಳೆದ 13 ಆವೃತ್ತಿಗಳ ಏಷ್ಯಾಕಪ್ ಇತಿಹಾಸದಲ್ಲಿ ಟೀಂ ಇಂಡಿಯಾ ಅತೀ ಹೆಚ್ಚು ಬಾರಿ ಪ್ರಶಸ್ತಿ ಗೆದ್ದ ತಂಡವಾಗಿದೆ. ಇನ್ನು 2016ರಲ್ಲಿ ಆಯೋಜಿಸಲಾದ ಟಿ20 ಪ್ರಕಾರದಲ್ಲೂ ಭಾರತವೇ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಟೀಂ ಇಂಡಿಯಾ ಒಟ್ಟು ಆರು ಬಾರಿ ಏಷ್ಯಾಕಪ್ ಚಾಂಪಿಯನ್ ಪಟ್ಟ ಅಲಂಕರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್