ದುಬೈ: ತೀವ್ರ ಕುತೂಹಲ ಕೆರಳಿಸಿರುವ ಏಷ್ಯಾಕಪ್ 2018 ಕ್ರಿಕೆಟ್ ಟೂರ್ನಿಯಲ್ಲಿ ಕ್ರಿಕೆಟ್ ಶಿಶುಗಳ ವಿರುದ್ಧದ ಪಂದ್ಯದಲ್ಲಿ ಹೀನಾಯ ಸೋಲು ಕಾಣುವ ಮೂಲಕ ಟೂರ್ನಿಯಿಂದಲೇ ಹೊರ ಬಿದ್ದಿದೆ.
ನಿನ್ನೆ ನಡೆದ ನಿರ್ಣಾಯಕ ಪಂದ್ಯದಲ್ಲಿ ಶ್ರೀಲಂಕಾ ತಂಡ ಆಪ್ಘಾನಿಸ್ತಾನದ ವಿರುದ್ಧ ಬರೊಬ್ಬರಿ 91 ರನ್ ಗಳ ಹೀನಾಯ ಸೋಲು ಕಂಡಿದೆ. ಆಫ್ಘಾನಿಸ್ತಾನ ನೀಡಿದ 250 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಶ್ರೀಲಂಕಾ 41.2 ಓವರ್ ಗಳಲ್ಲಿ ಕೇವಲ 158 ರನ್ ಗಳನ್ನಷ್ಟೇ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಆ ಮೂಲಕ ಲೀಗ್ ಹಂತದಲ್ಲೇ ಏಷ್ಯಾಕಪ್ ಟೂರ್ನಿಯಿಂದಲೇ ಹೊರಬಿದ್ದಿದೆ.
ಇನ್ನು ಆಫ್ಘನ್ನರ ವಿರೋಚಿತ ಹೋರಾಟಕ್ಕೆ ಕ್ರಿಕೆಟ್ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗುತ್ತಿದ್ದು, ನಾಯಕ ಅಸ್ಘರ್ ಆಫ್ಘನ್ ಬಣಕ್ಕೆ ಅಭಿನಂದನೆಗಳ ಮಹಾಪೂರ ಹರಿದು ಬರಿತ್ತಿದೆ.