ದುಬೈ: ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಟೀಂ ಇಂಡಿಯಾ ಆಟಗಾರರು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.
ಕಳೆದ ಟಿ20 ವಿಶ್ವಕಪ್ ಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಕಂಡಿತ್ತು. ಬಳಿಕ ಉಭಯ ತಂಡಗಳ ನಡುವೆ ಯಾವುದೇ ಪಂದ್ಯ ನಡೆದಿರಲಿಲ್ಲ. ಇದೀಗ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದ್ದ ಪಾಕ್ ತಂಡವನ್ನು ಟೀಂ ಇಂಡಿಯಾ ಸೋಲಿಸುವ ಮೂಲಕ ಸೇಡು ತೀರಿಸಿಕೊಂಡಿದೆ.
ಪಾಕ್ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದು ಈ ಖುಷಿಯನ್ನು ಆಟಗಾರರು ಹೋಟೆಲ್ ನಲ್ಲಿ ಕೇಕ್ ಕತ್ತರಿಸಿ ಆಚರಿಸಿದರು.
ವಿಶೇಷವೆಂದರೆ ಭುವನೇಶ್ವರ್ ಕುಮಾರ್ ಕತ್ತಿ ಬಳಸಿ ಕೇಕ್ ಕತ್ತರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲಾತಣಗಳಲ್ಲಿ ವೈರಲ್ ಆಗಿದೆ.