ಭಾರತದ ರಾಷ್ಟ್ರಗೀತೆ ಹಾಡಿದ ಪಾಕಿಸ್ತಾನಿ ಯುವಕ 
ಕ್ರಿಕೆಟ್

ಭಾರತ-ಪಾಕ್​ ಏಕದಿನ ಪಂದ್ಯದ ವೇಳೆ ಭಾರತದ ರಾಷ್ಟ್ರಗೀತೆ ಹಾಡಿದ ಪಾಕಿಸ್ತಾನಿ ಯುವಕ ಹೇಳಿದ್ದೇನು?

ಇತ್ತೀಚೆಗೆ ದುಬೈನಲ್ಲಿ ನಡೆದ ಏಷ್ಯಾಕಪ್​ ಟೂರ್ನಿಯ ಲೀಗ್​ ಹಂತದ ಭಾರತ-ಪಾಕಿಸ್ತಾನ ಪಂದ್ಯದ ವೇಳೆ ಪಾಕಿಸ್ತಾನದ ಯುವಕನೋರ್ವ ಭಾರತದ ರಾಷ್ಟ್ರಗೀತೆ ಹಾಡುವ ಮೂಲಕ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿದ್ದಾನೆ.

ಅಬುದಾಬಿ: ಇತ್ತೀಚೆಗೆ ದುಬೈನಲ್ಲಿ ನಡೆದ ಏಷ್ಯಾಕಪ್​ ಟೂರ್ನಿಯ ಲೀಗ್​ ಹಂತದ ಭಾರತ-ಪಾಕಿಸ್ತಾನ ಪಂದ್ಯದ ವೇಳೆ ಪಾಕಿಸ್ತಾನದ ಯುವಕನೋರ್ವ ಭಾರತದ ರಾಷ್ಟ್ರಗೀತೆ ಹಾಡುವ ಮೂಲಕ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿದ್ದಾನೆ.
ಪಾಕಿಸ್ತಾನದ ಮೂಲದ ಉದ್ಯಮಿ  ಆದಿಲ್​ ತಾಜ್​ ಎಂಬುವವರು ಭಾರತದ ರಾಷ್ಟ್ರಗೀತೆ ಹಾಡಿದ್ದರು. ಆ ವಿಡಿಯೋ ಈಗ ವೈರಲ್​ ಆಗಿದ್ದು, ಈ ಬಗ್ಗೆ ಆದಿಲ್​ ತಾಜ್​ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ್ದು, ಶಾಂತಿಗಾಗಿ ನನ್ನ ಕಡೆಯಿಂದ ಸಣ್ಣದೊಂದು ಪ್ರಯತ್ನವಿದು ಎಂದು ಹೇಳಿಕೊಡಿದ್ದಾರೆ.
'ಭಾರತದ ರಾಷ್ಟ್ರಗೀತೆಯನ್ನು ನಾನು ಮೊದಲ ಬಾರಿಗೆ ಕೇಳಿದ್ದು, ಬಾಲಿವುಡ್​ ಚಿತ್ರ ‘ಕಬಿ ಖುಷಿ ಕಬಿ ಗಂ’ನಲ್ಲಿ. ಆಗ ನನಗೆ ರೋಮಾಂಚನವಾಗಿತ್ತು. ಇದಕ್ಕೆ ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಅವರ ಪ್ರೇರಣೆಯೂ ಇದೆ. ಶಾಂತಿ ಸ್ಥಾಪನೆ ವಿಚಾರದಲ್ಲಿ ಭಾರತ ಒಂದು ಹೆಜ್ಜೆ ಮುಂದೆ ಬಂದರೆ ನಾವು ಎರಡು ಹೆಜ್ಜೆ ಮುಂದೆ ಹೋಗುತ್ತೇವೆ ಎಂದು ಇಮ್ರಾನ್​ ಖಾನ್​ ಪ್ರಧಾನಿಯಾಗಿ ಆಯ್ಕೆಯಾದ ದಿನ ಹೇಳಿದ್ದರು. ಕ್ರೀಡಾಂಗಣದಲ್ಲಿ ಭಾರತದ ರಾಷ್ಟ್ರಗೀತೆ ಮೊಳಗಿದಾಗ ಇಮ್ರಾನ್​ ಖಾನ್​ ಮಾತು ನನಗೆ ನೆನಪಾಯಿತು. ಶಾಂತಿ ಸ್ಥಾಪನೆಗಾಗಿ ನಾನು ನನ್ನ ಸಣ್ಣದೊಂದು ಪ್ರಯತ್ನ ಮಾಡಿದೆ ಎಂದು ಅದಿಲ್ ತಾಜ್  ಹೇಳಿಕೊಂಡಿದ್ದಾರೆ.
ಕ್ರೀಡಾಂಗಣದಲ್ಲಿ ಪಾಕಿಸ್ತಾನದ ರಾಷ್ಟ್ರಗೀತೆ ಮೊಳಗಿದಾಗ ಭಾರತದ ಯುವಕರು ಗೌರವ ಸಮರ್ಪಿಸಿದ್ದನ್ನು ನಾನು ಗಮನಿಸಿದೆ. ಕ್ರೀಡೆ ದೇಶಗಳನ್ನು ಬೆಸೆಯುತ್ತವೆ. ಏಷ್ಯಾಕಪ್​ 2018ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಬಹುದಾದ ಮುಂದಿನ ಪಂದ್ಯಕ್ಕೆ ಎರಡೂ ದೇಶಗಳ ರಾಷ್ಟ್ರ ಧ್ವಜಗಳನ್ನು ಕೊಂಡೊಯ್ಯುತ್ತೇನೆ ಮತ್ತು ಭಾರತ ಮತ್ತು ಪಾಕಿಸ್ತಾನದ ನಡುವೆ ಮತ್ತಷ್ಟು ಸರಣಿಗಳು ನಡೆಯಬೇಕು ಎಂದು ಹೇಳಿಕೊಂಡಿದ್ದಾರೆ.
ದುಬೈನಲ್ಲಿ ನಡೆದ ಭಾರತ-ಪಾಕಿಸ್ತಾನ ಪಂದ್ಯದ ವೇಳೆ, ಕ್ರೀಡಾಂಗಣದಲ್ಲಿ ಭಾರತದ ರಾಷ್ಟ್ರಗೀತೆ ಮೊಳಗಿದಾಗ ಪಾಕಿಸ್ತಾನದ ಯುವಕ ಆದಿಲ್​ ತಾಜ್​ ಅವರು ತಾವೂ ಕೂಡ ಅದಕ್ಕೆ ಧನಿಗೂಡಿಸಿದ್ದರು. ಆ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಭಾರಿ ಪ್ರಶಂಸೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್

'ಪ್ರೇಮದ ಊರಲಿ' ಚಿತ್ರ ವೀಕ್ಷಣೆಗೆ ಹೋಗಿದ್ದವರಿಗೆ ಶಾಕ್; ಮನೆಯಲ್ಲಿ ಕಳ್ಳ ಲಾಕ್, ಸಿಕ್ಕಿಬಿದ್ದಿದ್ದೇ ರೋಚಕ!

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!