ಪಾಕಿಸ್ತಾನ ಅಭಿಮಾನಿಗಳು 
ಕ್ರಿಕೆಟ್

ಬಾಂಗ್ಲಾ ವಿರುದ್ಧ ಪಾಕ್ ಹೀನಾಯ ಸೋಲು, ಭಾರತ ವಿರುದ್ಧ ಪಾಕ್ ಹ್ಯಾಟ್ರಿಕ್ ಸೋಲು ತಪ್ಪಿಸಿದ್ದಕ್ಕೆ ಥ್ಯಾಂಕ್ಸ್!

ಏಷ್ಯಾಕಪ್ ಸೂಪರ್ 4ರ ಹಂತದ ಮಹತ್ವದ ಪಂದ್ಯದಲ್ಲಿ ಪಾಕಿಸ್ತಾನ ಬಾಂಗ್ಲಾದೇಶ ವಿರುದ್ಧ ಸೋಲು ಕಂಡಿರುವುದಕ್ಕೆ ಪಾಕ್ ಅಭಿಮಾನಿಗಳು ಅಸಮಾಧಾನಗೊಂಡಿದ್ದು ಅಲ್ಲದೇ...

ದುಬೈ: ಏಷ್ಯಾಕಪ್ ಸೂಪರ್ 4ರ ಹಂತದ ಮಹತ್ವದ ಪಂದ್ಯದಲ್ಲಿ ಪಾಕಿಸ್ತಾನ ಬಾಂಗ್ಲಾದೇಶ ವಿರುದ್ಧ ಸೋಲು ಕಂಡಿರುವುದಕ್ಕೆ ಪಾಕ್ ಅಭಿಮಾನಿಗಳು ಅಸಮಾಧಾನಗೊಂಡಿದ್ದು ಅಲ್ಲದೇ ಟೀಂ ಇಂಡಿಯಾ ವಿರುದ್ಧ ಹ್ಯಾಟ್ರಿಕ್ ಸೋಲು ತಪ್ಪಿಸಿಕೊಂಡಿದ್ದೇವೆ ಎಂದು ಹೇಳಿ ತಂಡಕ್ಕೆ ಶುಭಕೋರಿದ್ದಾರೆ. 
ಬಾಂಗ್ಲಾದೇಶ ನೀಡಿದ 239 ರನ್ ಗುರಿ ಬೆನ್ನಟ್ಟಿದ್ದ ಪಾಕಿಸ್ತಾನ ಪಂದ್ಯದ ಆರಂಭಿಕ 4 ಓವರ್ ಗಳಲ್ಲಿ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸೋಲು ಖಚಿಪಡಿಸಿತ್ತು. ಇದರ ಬೆನ್ನಲ್ಲೇ ಸೋಲು ಖಚಿತಪಡಿಸಿಕೊಂಡ ಅಭಿಮಾನಿಗಳು ಟ್ರೋಲ್ ಆರಂಭಿಸಿದ್ದರು. 
ಇನ್ನು ತಂಡದ ನಾಯಕ ಸರ್ಫರಾಜ್ ಖಾನ್ ವಿರುದ್ಧ ಅಸಮಾಧಾಗೊಂಡಿರುವ ಅಭಿಮಾನಿಗಳು ನಾಯಕತ್ವದಿಂದ ಕೆಳಗಿಳಿಸುವಂತೆ ಪಾಕ್ ಕ್ರಿಕೆಟ್ ಮಂಡಳಿಯನ್ನು ಆಗ್ರಹಿಸಿದ್ದಾರೆ. 
ಪಾಕಿಸ್ತಾನ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿ 37 ರನ್ ಗಳಿಂದ ಸೋಲುಂಡು ಟೂರ್ನಿಯಲ್ಲಿ ಫೈನಲ್ ಪ್ರವೇಶಿಸುವ ಅವಕಾಶವನ್ನು ಕಳೆದುಕೊಂಡಿತು. 
ಇನ್ನು ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಪಾಕ್ ಜಯಗಳಿಸಿದ್ದರೆ 3ನೇ ಬಾರಿ ಟೀಂ ಇಂಡಿಯಾ ವಿರುದ್ಧ ಸೋಲುತಿತ್ತು ಎಂದು ಅಭಿಮಾನಿಗಳು ಟ್ವೀಟ್ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?